RRB Recruitment 2025: ರೈಲ್ವೇ ನೇಮಕಾತಿ; 1036 ಹುದ್ದೆಗಳು ಖಾಲಿ, ಈ ಕೂಡಲೇ ಅರ್ಜಿ ಸಲ್ಲಿಸಿ

ರೈಲ್ವೇ ನೇಮಕಾತಿ ಮಂಡಳಿ (RRB) 1036ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. ಶಿಕ್ಷಕರು, ವೈಜ್ಞಾನಿಕ ಮೇಲ್ವಿಚಾರಕರು, ಗ್ರಂಥಪಾಲಕರು ಮುಂತಾದ ಹಲವು ಹುದ್ದೆಗಳು ಖಾಲಿ ಇವೆ. ಫೆಬ್ರವರಿ 6, 2025 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಹತೆ ಮತ್ತು ವಯೋಮಿತಿ ವಿವರಗಳಿಗಾಗಿ ಅಧಿಸೂಚನೆಯನ್ನು ಪರಿಶೀಲಿಸಿ.

RRB Recruitment 2025: ರೈಲ್ವೇ ನೇಮಕಾತಿ; 1036 ಹುದ್ದೆಗಳು ಖಾಲಿ, ಈ ಕೂಡಲೇ ಅರ್ಜಿ ಸಲ್ಲಿಸಿ
Railway Recruitment 2025
Follow us
ಅಕ್ಷತಾ ವರ್ಕಾಡಿ
|

Updated on: Jan 08, 2025 | 11:05 AM

ನಿರುದ್ಯೋಗಿಗಳಿಗೆ ರೈಲ್ವೇ ಇಲಾಖೆ ಸಿಹಿಸುದ್ದಿ ನೀಡಿದೆ. ರೈಲ್ವೇ ನೇಮಕಾತಿ ಮಂಡಳಿ (RRB) ವಿವಿಧ ಹುದ್ದೆಗಳಲ್ಲಿ ಪದವೀಧರ ಶಿಕ್ಷಕರು, ವೈಜ್ಞಾನಿಕ ಮೇಲ್ವಿಚಾರಕರು, ತರಬೇತಿ ಪಡೆದ ಪದವೀಧರ ಶಿಕ್ಷಕರು, ಮುಖ್ಯ ಕಾನೂನು ಸಹಾಯಕರು, ಪಬ್ಲಿಕ್ ಪ್ರಾಸಿಕ್ಯೂಟರ್, ದೈಹಿಕ ತರಬೇತಿ ಬೋಧಕರು, ಕಿರಿಯ ಅನುವಾದಕರು, ಗ್ರಂಥಪಾಲಕರು, ಪ್ರಾಥಮಿಕ ರೈಲ್ವೇ ಶಿಕ್ಷಕರು, ಸಹಾಯಕ ಶಿಕ್ಷಕರು ಇತ್ಯಾದಿಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಫೆಬ್ರವರಿ 6 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಈ ಅಧಿಸೂಚನೆಯ ಅಡಿಯಲ್ಲಿ ಒಟ್ಟು 1036 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಹುದ್ದೆಗಳ ವಿವರ ಹೀಗಿವೆ:

  • ಸ್ನಾತಕೋತ್ತರ ಶಿಕ್ಷಕರ ಹುದ್ದೆಗಳ ಸಂಖ್ಯೆ : 187
  • ವೈಜ್ಞಾನಿಕ ಮೇಲ್ವಿಚಾರಕ ಹುದ್ದೆಗಳ ಸಂಖ್ಯೆ: 03
  • ತರಬೇತಿ ಪಡೆದ ಪದವೀಧರ ಶಿಕ್ಷಕರ ಹುದ್ದೆಗಳ ಸಂಖ್ಯೆ: 338
  • ಮುಖ್ಯ ಕಾನೂನು ಸಹಾಯಕ ಹುದ್ದೆಗಳ ಸಂಖ್ಯೆ: 54
  • ಪಬ್ಲಿಕ್ ಪ್ರಾಸಿಕ್ಯೂಟರ್ ಹುದ್ದೆಗಳ ಸಂಖ್ಯೆ: 20
  • ದೈಹಿಕ ತರಬೇತಿ ಬೋಧಕ ಹುದ್ದೆಗಳ ಸಂಖ್ಯೆ: 18
  • ವೈಜ್ಞಾನಿಕ ಸಹಾಯಕ/ತರಬೇತಿ ಹುದ್ದೆಗಳ ಸಂಖ್ಯೆ: 02
  • ಜೂನಿಯರ್ ಅನುವಾದಕ ಹುದ್ದೆಗಳ ಸಂಖ್ಯೆ: 130
  • ಹಿರಿಯ ಪ್ರಚಾರ ನಿರೀಕ್ಷಕ ಹುದ್ದೆಗಳ ಸಂಖ್ಯೆ: 03
  • ಸಿಬ್ಬಂದಿ ಮತ್ತು ಕಲ್ಯಾಣ ನಿರೀಕ್ಷಕ ಹುದ್ದೆಗಳ ಸಂಖ್ಯೆ: 59
  • ಸಂಗೀತ ಶಿಕ್ಷಕರ ಹುದ್ದೆಗಳ ಸಂಖ್ಯೆ: 10
  • ಪ್ರಾಥಮಿಕ ರೈಲ್ವೇ ಶಿಕ್ಷಕರ ಹುದ್ದೆಗಳ ಸಂಖ್ಯೆ: 03
  • ಗ್ರಂಥಪಾಲಕ ಹುದ್ದೆಗಳ ಸಂಖ್ಯೆ: 188
  • ಸಹಾಯಕ ಶಿಕ್ಷಕರ ಹುದ್ದೆಗಳ ಸಂಖ್ಯೆ: 02
  • ಪ್ರಯೋಗಾಲಯ ಸಹಾಯಕ/ ಶಾಲಾ ಹುದ್ದೆಗಳ ಸಂಖ್ಯೆ: 07
  • ಲ್ಯಾಬ್ ಅಸಿಸ್ಟೆಂಟ್ ಗ್ರೇಡ್-3 ಹುದ್ದೆಗಳ ಸಂಖ್ಯೆ: 12

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೊಮಾ, ಪದವಿ, ಪಿಜಿ, ಪಿಜಿ ಡಿಪ್ಲೊಮಾ, ಎಂಬಿಎ ಜೊತೆಗೆ ಆಯಾ ವಿಭಾಗಗಳಲ್ಲಿ ಟಿಇಟಿಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳ ವಯೋಮಿತಿ ಜನವರಿ 01, 2025 ಕ್ಕೆ ಕನಿಷ್ಟ 18 ವರ್ಷಗಳಾಗಿರಬೇಕು. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 6, 2025 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಸಾಮಾನ್ಯ ಅಭ್ಯರ್ಥಿಗಳು ರೂ.500 ಮತ್ತು ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಬಿಡಿ/ಮಾಜಿ ಸೈನಿಕರು/ಇಬಿಸಿ/ಅಲ್ಪಸಂಖ್ಯಾತ ಅಭ್ಯರ್ಥಿಗಳು ರೂ.250 ಅರ್ಜಿ ಶುಲ್ಕವನ್ನು ಪಾವತಿಸಬೇಕು. ಅಂತಿಮ ಆಯ್ಕೆಯು ಆನ್‌ಲೈನ್ ಪರೀಕ್ಷೆ, ಬೋಧನಾ ಕೌಶಲ್ಯ ಪರೀಕ್ಷೆ, ಭಾಷಾಂತರ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಇತ್ಯಾದಿಗಳನ್ನು ಆಧರಿಸಿರುತ್ತದೆ. ಇತರ ವಿವರಗಳನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ಇದನ್ನೂ ಓದಿ: ಕೆನರಾ ಬ್ಯಾಂಕ್ ಉದ್ಯೋಗಾವಕಾಶಗಳು; ಪದವಿ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

ಪ್ರಮುಖ ದಿನಾಂಕಗಳು:

  • ಆನ್‌ಲೈನ್ ಅಪ್ಲಿಕೇಶನ್‌ಗಳ ಪ್ರಾರಂಭ ದಿನಾಂಕ: ಜನವರಿ 7, 2025.
  • ಆನ್‌ಲೈನ್ ಅಪ್ಲಿಕೇಶನ್‌ಗಳಿಗೆ ಕೊನೆಯ ದಿನಾಂಕ: ಫೆಬ್ರವರಿ 6, 2025 ರಿಂದ ರಾತ್ರಿ 11.59 ರವರೆಗೆ
  • ಶುಲ್ಕ ಪಾವತಿಗೆ ಕೊನೆಯ ದಿನಾಂಕ: ಫೆಬ್ರವರಿ 8, 2025.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ