RBI Recruitment 2025: ಭಾರತೀಯ ರಿಸರ್ವ್ ಬ್ಯಾಂಕ್ನಲ್ಲಿ ನೇಮಕಾತಿ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ
ಭಾರತೀಯ ರಿಸರ್ವ್ ಬ್ಯಾಂಕ್ (RBI) 5 ವೈದ್ಯಕೀಯ ಸಲಹೆಗಾರರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಎಂಬಿಬಿಎಸ್ ಪದವಿ ಮತ್ತು 2 ವರ್ಷಗಳ ಅನುಭವ ಹೊಂದಿರುವವರು ಗುತ್ತಿಗೆ ಆಧಾರದ ಈ ಹುದ್ದೆಗಳಿಗೆ ಅರ್ಹರು. ಆಸಕ್ತರು ಡಿಸೆಂಬರ್ 11ರೊಳಗೆ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ಗಂಟೆಗೆ 1000 ರೂ. ಗೌರವಧನ ನೀಡಲಾಗುತ್ತದೆ. ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆ ಪರಿಶೀಲಿಸಿ.

ಚೆನ್ನೈನಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕ್ (RBI) ಖಾಲಿ ಇರುವ ವೈದ್ಯಕೀಯ ಸಲಹೆಗಾರರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯಡಿಯಲ್ಲಿ ಒಟ್ಟು 5 ವೈದ್ಯಕೀಯ ಸಲಹೆಗಾರರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 11 ರೊಳಗೆ ಅರ್ಜಿ ಸಲ್ಲಿಸತಕ್ಕದ್ದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಭಾಗದಲ್ಲಿ MBBS ಪಾಸಾಗಿರಬೇಕು. ಅಧಿಸೂಚನೆಯಲ್ಲಿ ಉಲ್ಲೇಖಿಸಿರುವಂತೆ ಅವರು ಎರಡು ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು. ಈ ಅರ್ಹತೆಗಳನ್ನು ಹೊಂದಿರುವವರು ಡಿಸೆಂಬರ್ 11 ರೊಳಗೆ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಂಚೆ ಮೂಲಕ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು. ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದವರಿಗೆ ಪ್ರತಿ ಗಂಟೆಗೆ ಪ್ರತಿ ಭೇಟಿಗೆ ರೂ. 1000 ಪಾವತಿಸಲಾಗುತ್ತದೆ. ಕೆಳಗಿನ ಅಧಿಸೂಚನೆಯಲ್ಲಿ ಇತರ ವಿವರಗಳನ್ನು ಪರಿಶೀಲಿಸಿ.
ಇದನ್ನೂ ಓದಿ: 25,487 ಕಾನ್ಸ್‌ಟೇಬಲ್ ಹುದ್ದೆಗೆ ನೇಮಕಾತಿ; 10 ನೇ ತರಗತಿ ಪಾಸಾಗಿದ್ರೆ ಸಾಕು
ವಿಳಾಸ: ನಿರ್ದೇಶಕರು, ಮಾನವ ಸಂಪನ್ಮೂಲ ನಿರ್ವಹಣಾ ಇಲಾಖೆ (ನೇಮಕಾತಿ ವಿಭಾಗ), ಭಾರತೀಯ ರಿಸರ್ವ್ ಬ್ಯಾಂಕ್, ಫೋರ್ಟ್ ಗ್ಲೇಸಿಸ್, 16, ರಾಜಾಜಿ ಸಲೈ, ಚೆನ್ನೈ – 600 001
ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:57 pm, Tue, 2 December 25




