REC recruitment 2023: ವಿವಿಧ 125 ಹುದ್ದೆಗಳ ನೇಮಕಾತಿ, ಕೂಡಲೇ ಅರ್ಜಿ ಹಾಕಿ

REC ಲಿಮಿಟೆಡ್​ನ ಮಹಾರತ್ನ ಪಬ್ಲಿಕ್​ ಸೆಕ್ಟರ್​ ಎಂಟರ್‌ಪ್ರೈಸಸ್​ನಲ್ಲಿ ಖಾಲಿ ಇರುವ ವಿವಿಧ ಒಟ್ಟು 125 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಈ ಬಗ್ಗೆ ಇನ್ನಷ್ಟು ವಿವರ ಈ ಕೆಳಗಿನಂತಿದೆ.

REC recruitment 2023: ವಿವಿಧ 125 ಹುದ್ದೆಗಳ ನೇಮಕಾತಿ, ಕೂಡಲೇ ಅರ್ಜಿ ಹಾಕಿ
Follow us
ರಮೇಶ್ ಬಿ. ಜವಳಗೇರಾ
|

Updated on:Mar 20, 2023 | 1:36 PM

REC ಲಿಮಿಟೆಡ್​ನ ಮಹಾರತ್ನ ಪಬ್ಲಿಕ್​ ಸೆಕ್ಟರ್​ ಎಂಟರ್‌ಪ್ರೈಸಸ್​ನಲ್ಲಿ (REC limited is a Maharatna Public Sector Enterprise) ಖಾಲಿರುವ ಒಟ್ಟು 125 ಹುದ್ದೆಗಳಿಗೆ(Jobs) ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು 2023ರ ಏಪ್ರಿಲ್ 15 ಕೊನೆ ದಿನವಾಗಿದೆ. ಈ ಹಿನ್ನೆಲೆಯಲ್ಲಿ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ recindia.nic.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೋರಲಾಗಿದೆ. ಇಂಜಿನಿಯರಿಂಗ್ ವಿಭಾಗ, ಫೈನನ್ಸ್ ಹಾಗೂ ಅಕೌಂಟ್ಸ್​, ಎಚ್‌ಆರ್, ಐಟಿ, ಕಾರ್ಪೊರೇಟ್ ಕಮ್ಯೂನಿಕೇಶನ್, ಕಂಪನಿ ಸೆಕ್ರೆಟರಿಯೇಟ್ (ಸಿಎಸ್) ವಿಭಾಗದಲ್ಲಿ ಕಾರ್ಯನಿರ್ವಹಿಸಲು ಒಟ್ಟು 125 ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ.

ಇದನ್ನೂ ಓದಿ: Agniveer Recruitment 2023: ಅಗ್ನಿವೀರರ ನೇಮಕಾತಿ, ಆನ್​ಲೈನ್ ಅರ್ಜಿ ಸಲ್ಲಿಸಲು ಇಂದೇ ಕೊನೆಯ ಅವಕಾಶ

ಹುದ್ದೆಗಳ ವಿವರ:

ಜನರಲ್ ಮ್ಯಾನೇಜರ್(ಇಂಜಿನಿಯರಿಂಗ್)- 5 ಹುದ್ದೆಗಳು, ಮ್ಯಾನೇಜರ್(ಇಂಜಿನಿಯರಿಂಗ್)-5 ಹುದ್ದೆಗಳು, ಡಿಪ್ಯೂಟಿ ಮ್ಯಾನೇಜರ್(ಇಂಜಿನಿಯರಿಂಗ್)- 4 ಹುದ್ದೆಗಳು, ಅಸಿಸ್ಟೆಂಟ್ ಮ್ಯಾನೇಜರ್(ಇಂಜಿನಿಯರಿಂಗ್)-3 ಹುದ್ದೆಗಳು., ಆಫೀಸರ್(ಇಂಜಿನಿಯರಿಂಗ್)-2 ಹುದ್ದೆಗಳು, ಡಿಪ್ಯೂಟಿ ಜನರಲ್ ಮ್ಯಾನೇಜರ್ (ಫೈನಾನ್ಸ್​ ಮತ್ತು ಅಕೌಂಟ್ಸ್​)- 7 ಹುದ್ದೆಗಳು, ಮ್ಯಾನೇಜರ್(ಫೈನಾನ್ಸ್​ ಮತ್ತು ಅಕೌಂಟ್ಸ್​) 5 ಹುದ್ದೆಗಳು, ಆಫೀಸರ್(ಫೈನಾನ್ಸ್​ ಮತ್ತು ಅಕೌಂಟ್ಸ್​)-2 ಹುದ್ದೆಗಳು, ಅಸಿಸ್ಟೆಂಟ್ ಮ್ಯಾನೇಜರ್(HR) -3 ಹುದ್ದೆಗಳು, ಸೇರಿದಂತೆ ಒಟ್ಟು 125 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪಿಡಬ್ಲ್ಯೂಬಿಡಿ, ಮಾಜಿ ಸೈನಿಕರು ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ. ಇವರನ್ನು ಹೊರತುಪಡಿಸಿ ಇನ್ನುಳಿದ ಅಭ್ಯರ್ಥಿಗಳಿಗೆ 1000 ರೂ.ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

REC ನೇಮಕಾತಿಗೆ ಅರ್ಜಿ ಸಲ್ಲಿಸುವುದೇಗೆ?

  • recindia.nic.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
  • ಮುಖಪುಟದಲ್ಲಿ ಓಪನ್​ ಆಗುವ ಜಾಬ್​ ಮೇಲೆ ಕ್ಲಿಕ್ ಮಾಡಬೇಕು.
  • ಬಳಿಕ ಅಲ್ಲಿ ಕೇಳಿದ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಜೊತೆಗೆ ಅಗತ್ಯ ದಾಖಲೆಗಳನ್ನು ಸಹ ಅಲ್ಲಿ ಅಪ್ಲೋಡ್ ಮಾಡಬೇಕು.
  • ಎಲ್ಲಾ ಮಾಹಿತಿ ಭರ್ತಿ ಮಾಡಿದ ಬಳಿಕ ಅರ್ಜಿಯನ್ನು ಪ್ರಿಂಟ್ ಔಟ್​ ತೆಗೆದುಕೊಳ್ಳಿ

ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಅಧಿಕೃತ ನೋಟಿಫಿಕೇಶನಲ್ಲಿ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್​ ಮಾಡಿ

Published On - 1:35 pm, Mon, 20 March 23

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ