CSL Recruitment 2022: 10ನೇ ತರಗತಿಯಲ್ಲಿ ಪಾಸಾದವರಿಗೆ ಶಿಪ್​ಯಾರ್ಡ್​ನಲ್ಲಿದೆ ಉದ್ಯೋಗಾವಕಾಶ

| Updated By: ಝಾಹಿರ್ ಯೂಸುಫ್

Updated on: Jul 14, 2022 | 3:36 PM

CSL Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು CSL ನ ಅಧಿಕೃತ ವೆಬ್‌ಸೈಟ್ cochinshipyard.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

CSL Recruitment 2022: 10ನೇ ತರಗತಿಯಲ್ಲಿ ಪಾಸಾದವರಿಗೆ ಶಿಪ್​ಯಾರ್ಡ್​ನಲ್ಲಿದೆ ಉದ್ಯೋಗಾವಕಾಶ
CSL Recruitment 2022
Follow us on

CSL Recruitment 2022: ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL) ನಲ್ಲಿ ಕೆಲಸ ಮಾಡಲು ಯೋಜಿಸುತ್ತಿರುವ ಯುವಕರಿಗೆ ಇಲ್ಲಿದೆ ಉತ್ತಮ ಅವಕಾಶವಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು CSL ನ ಅಧಿಕೃತ ವೆಬ್‌ಸೈಟ್ cochinshipyard.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 15 ಆಗಿದ್ದು, ಹೀಗಾಗಿ ಶುಕ್ರವಾರದೊಳಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 330

ಹುದ್ದೆಗಳ ಹೆಸರು:

ಇದನ್ನೂ ಓದಿ
ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.
Agniveer Recruitment 2022: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿಯ ಅಧಿಸೂಚನೆ ಪ್ರಕಟ
SCI Recruitment 2022: ಸುಪ್ರೀ ಕೋರ್ಟ್ ನೇಮಕಾತಿ: ಪದವಿ ಹೊಂದಿರುವವರಿಗೆ ಅವಕಾಶ, ವೇತನ 63 ಸಾವಿರ ರೂ.
Indian Navy recruitment 2022: ನೌಕಾಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ
  • ಶೀಟ್ ಮೆಟಲ್ ವರ್ಕರ್-56 ಹುದ್ದೆಗಳು
  • ವೆಲ್ಡರ್-68 ಹುದ್ದೆಗಳು
  • ಫಿಟ್ಟರ್-21 ಹುದ್ದೆಗಳು
  • ಮೆಕ್ಯಾನಿಕ್ ಡೀಸೆಲ್-13 ಹುದ್ದೆಗಳು
  • ಮೆಕ್ಯಾನಿಕ್ ಮೋಟಾರ್ ವೆಹಿಕಲ್-05 ಹುದ್ದೆಗಳು
  • ಪ್ಲಂಬರ್-40 ಹುದ್ದೆಗಳು
  • ಪೇಂಟರ್-14 ಹುದ್ದೆಗಳು
  • ಎಲೆಕ್ಟ್ರಿಷಿಯನ್-28 ಹುದ್ದೆಗಳು
  • ಕ್ರೇನ್ ಆಪರೇಟರ್ (EOT)-19 ಹುದ್ದೆಗಳು
  • ​​ಎಲೆಕ್ಟ್ರಾನಿಕ್ ಮೆಕ್ಯಾನಿಕ್-23 ಹುದ್ದೆಗಳು
  • ಇನ್ಸ್ಟ್ರುಮೆಂಟ್ ಮೆಕ್ಯಾನಿಕ್-24 ಹುದ್ದೆಗಳು
  • ಶಿಪ್ ರೈಟ್ ಹುಡ್-23 ಹುದ್ದೆಗಳು
  • ಮೆಷಿನಿಸ್ಟ್- 02 ಹುದ್ದೆಗಳು
  • ಏರ್ ಕಂಡೀಷನರ್ ತಂತ್ರಜ್ಞ -02 ಹುದ್ದೆಗಳು
  • ಡ್ರಾಫ್ಟ್ಸ್‌ಮನ್ (ಸಿವಿಲ್)- 02 ಹುದ್ದೆಗಳು

ಅರ್ಹತಾ ಮಾನದಂಡಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್​ಎಸ್​ಎಲ್​ಸಿಯಲ್ಲಿ ಪಾಸ್​ ಆಗಿರಬೇಕು. ಜೊತೆಗೆ ಸಂಬಂಧಿತ ವಿಷಯದಲ್ಲಿ ಐಟಿಐ ಮಾಡಿರಬೇಕು.

ವಯೋಮಿತಿ:
ಈ ಹುದ್ದೆಗಳ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 30 ವರ್ಷಕ್ಕಿಂತ ಹೆಚ್ಚಿರಬಾರದು.

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ 300 ಪಾವತಿಸಬೇಕಾಗುತ್ತದೆ.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 15, 2022

ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.