AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Army Recruitment 2022: ವಾಷರ್‌ಮ್ಯಾನ್ ಮತ್ತು ಟ್ರೇಡ್ಸ್‌ಮ್ಯಾನ್ ಮೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಸೇನೆಯ ದಕ್ಷಿಣ ಕಮಾಂಡ್‌ನ ಪ್ರಧಾನ ಕಚೇರಿ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ವಾಷರ್‌ಮ್ಯಾನ್ ಮತ್ತು ಟ್ರೇಡ್ಸ್‌ಮ್ಯಾನ್ ಮೇಟ್ ಹುದ್ದೆಗಳಿಗೆ 25 ವರ್ಷದ ಒಳಗಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Indian Army Recruitment 2022: ವಾಷರ್‌ಮ್ಯಾನ್ ಮತ್ತು ಟ್ರೇಡ್ಸ್‌ಮ್ಯಾನ್ ಮೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸಾಂಕೇತಿಕ ಚಿತ್ರ
TV9 Web
| Updated By: Rakesh Nayak Manchi|

Updated on:Jun 12, 2022 | 5:56 PM

Share

ಭಾರತೀಯ ಸೇನೆಯ ದಕ್ಷಿಣ ಕಮಾಂಡ್‌ನ ಪ್ರಧಾನ ಕಛೇರಿ (Headquarters of Southern Command) ನೇಮಕಾತಿ (Recruitment) ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ವಾಷರ್‌ಮ್ಯಾನ್ ಮತ್ತು ಟ್ರೇಡ್ಸ್‌ಮ್ಯಾನ್ ಮೇಟ್ ಹುದ್ದೆಗಳಿಗೆ ಅರ್ಜಿದಾರರನ್ನು ನೇಮಿಸಿಕೊಳ್ಳಲಾಗುತ್ತದೆ. ಉದ್ಯೋಗ ಸುದ್ದಿಯಲ್ಲಿ ಈ ಜಾಹೀರಾತನ್ನು ಪ್ರಕಟಿಸಿದ ದಿನಾಂಕದಿಂದ 45 ದಿನಗಳಲ್ಲಿ ಅಭ್ಯರ್ಥಿಗಳು ತಮ್ಮ ಅರ್ಜಿ ನಮೂನೆಯನ್ನು ಆಫ್‌ಲೈನ್ ಮೂಲಕ ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಭರ್ತಿ ಮಾಡಿ ಸಲ್ಲಿಸಬೇಕು. ಈ ನೇಮಕಾತಿ ಅಭಿಯಾನದ ಮೂಲಕ ಒಟ್ಟು 65 ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಆಯ್ಕೆಯಾದ ಅಭ್ಯರ್ಥಿಗಳನ್ನು ದಕ್ಷಿಣ ಕಮಾಂಡ್ ಅಡಿಯಲ್ಲಿ ಯಾವುದೇ AMC ಘಟಕದಲ್ಲಿ ಎಲ್ಲಿ ಬೇಕಾದರೂ ಸೇವೆ ಸಲ್ಲಿಸಲು ಸಿದ್ಧರಾಗಿರಬೇಕು.

ಇದನ್ನೂ ಓದಿ: Jobs: ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದಲ್ಲಿನ 130 ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕ, ವಯಸ್ಸಿನ ಮಿತಿ ಮತ್ತು ಹುದ್ದೆಯ ವಿವರಗಳು

ಅರ್ಜಿಯನ್ನು ಸ್ವೀಕರಿಸಲು ಕೊನೆಯ ದಿನಾಂಕ: ಜಾಹೀರಾತು ಪ್ರಕಟಣೆಯ ದಿನಾಂಕದಿಂದ 45 ದಿನಗಳು

ವಾಷರ್ಮನ್: 39 ಹುದ್ದೆಗಳು

ಟ್ರೇಡ್ಸ್‌ಮನ್ ಮೇಟ್: 26 ಹುದ್ದೆಗಳು

ವಯಸ್ಸಿನ ಮಿತಿ: 18 ರಿಂದ 25 ವರ್ಷ ವಯಸ್ಸಿನ ಒಳಗಿನವರು

ಅರ್ಜಿ ಶುಲ್ಕ: 100 ರೂಪಾಯಿ

ಇದನ್ನೂ ಓದಿ: NPCIL Recruitment 2022: ಪರೀಕ್ಷೆ ಇಲ್ಲದೆ ಉದ್ಯೋಗ ಪಡೆಯುವ ಸುವರ್ಣ ಅವಕಾಶ! ಬೇಗ ಅರ್ಜಿ ಸಲ್ಲಿಸಿ

ಅರ್ಹತಾ ಮಾನದಂಡ

ವಾಷರ್‌ಮನ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್ ಪಾಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಮತ್ತು ಮಿಲಿಟರಿ/ನಾಗರಿಕ ಬಟ್ಟೆಗಳನ್ನು ಚೆನ್ನಾಗಿ ತೊಳೆಯಲು ಶಕ್ತರಾಗಿರಬೇಕು. ಟ್ರೇಡ್ಸ್‌ಮನ್ ಮೇಟ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್ ಪಾಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ವ್ಯಾಪಾರದಲ್ಲಿ ಒಂದು ವರ್ಷದ ಅನುಭವ ಹೊಂದಿರಬೇಕು.

ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆಯ್ಕೆ ವಿಧಾನ ಮತ್ತು ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಗಳಲ್ಲಿನ ಮೆರಿಟ್ ಮತ್ತು ಸ್ಟಿಲ್/ಟ್ರೇಡ್ ಗುಣಮಟ್ಟದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಪ್ರತಿಯೊಬ್ಬ ಅರ್ಜಿದಾರರು ಪ್ರತಿ ಹುದ್ದೆಗೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿಯನ್ನು ‘ದಿ ಕಮಾಂಡೆಂಟ್, ಮಿಲಿಟರಿ ಹಾಸ್ಪಿಟಲ್, ಡಿಫೆನ್ಸ್ ಕಾಲೋನಿ ರಸ್ತೆ ಚೆನ್ನೈ, ತಮಿಳುನಾಡು, ಪಿನ್ : 600032’ಕ್ಕೆ ಕಳುಹಿಸಬೇಕು. ಅರ್ಜಿಯನ್ನು ನೋಂದಾಯಿತ ಪೋಸ್ಟ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಮಾತ್ರ ಸಲ್ಲಿಸಬೇಕು. ಅಭ್ಯರ್ಥಿಗಳು ಕ್ಯಾಪಿಟಲ್ ಲೆಟರ್‌ನಲ್ಲಿ ಲಕೋಟೆ ಮತ್ತು ವರ್ಗದ ಮೇಲ್ಭಾಗದಲ್ಲಿ ಯಾವ ಹುದ್ದೆಗೆ ಅರ್ಜಿ ಸಲ್ಲಿಸಲಾಗುತ್ತಿದೆ ಎಂಬುದನ್ನು ಸ್ಪಷ್ಟವಾಗಿ ಬರೆಯಬೇಕು. ಮೀಸಲು ವರ್ಗದ ಅಭ್ಯರ್ಥಿಯು ಲಕೋಟೆಯ ಎಡ ಮೂಲೆಯಲ್ಲಿ ತಮ್ಮ ವರ್ಗವನ್ನು ಸಹ ಬರೆಯಬೇಕು.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:51 pm, Sun, 12 June 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?