NPCIL Recruitment 2022: ಪರೀಕ್ಷೆ ಇಲ್ಲದೆ ಉದ್ಯೋಗ ಪಡೆಯುವ ಸುವರ್ಣ ಅವಕಾಶ! ಬೇಗ ಅರ್ಜಿ ಸಲ್ಲಿಸಿ

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL) ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಮೆರಿಟ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಈವರೆಗೆ ಅರ್ಜಿ ಸಲ್ಲಿಸದ ಅರ್ಹ ಅಭ್ಯರ್ಥಿಗಳು ಜೂನ್ 16ರ ಒಳಗಾಗಿ ಅರ್ಜಿ ಸಲ್ಲಿಸಬಹುದು.

NPCIL Recruitment 2022: ಪರೀಕ್ಷೆ ಇಲ್ಲದೆ ಉದ್ಯೋಗ ಪಡೆಯುವ ಸುವರ್ಣ ಅವಕಾಶ! ಬೇಗ ಅರ್ಜಿ ಸಲ್ಲಿಸಿ
NPCIL
Follow us
TV9 Web
| Updated By: Rakesh Nayak Manchi

Updated on:Jun 12, 2022 | 3:26 PM

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL) ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ (Recruitment) ಮಾಡಿಕೊಳ್ಳುತ್ತಿದ್ದು, ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಹತ್ತಿರ ಬರುತ್ತಿದೆ. ಅರ್ಜಿ ಸಲ್ಲಿಸದ ಅಭ್ಯರ್ಥಿಗಳು ಆದಷ್ಟು ಬೇಗ ಅರ್ಜಿ ಸಲ್ಲಿಸಬಹುದು. ಒಟ್ಟು 50 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಮೇ 27ರಿಂದ ಅರ್ಜಿ ಸಲ್ಲಿಕೆ ಆರಂಭಗೊಂಡಿದೆ. ಅರ್ಜಿ ಸಲ್ಲಿಸಲು ಜೂನ್ 16 ಕೊನೆಯ ದಿನವಾಗಿದ್ದು, ಇನ್ನೂ ಅರ್ಜಿ ಸಲ್ಲಿಸದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ npcilcareers.co.in ಗೆ ಭೇಟಿ ನೀಡಿ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: UPSC Recruitment 2022: ಒಟ್ಟು 24 ಹುದ್ದೆಗಳಿಗೆ ಅರ್ಜಿ ಆಹ್ವಾನ

ಒಟ್ಟು ಖಾಲಿ ಹುದ್ದೆಗಳು- 50

ಫಿಟ್ಟರ್ – 25 ಹುದ್ದೆಗಳು

ಎಲೆಕ್ಟ್ರಿಷಿಯನ್ – 13 ಹುದ್ದೆಗಳು

ಎಲೆಕ್ಟ್ರಾನಿಕ್ ಮೆಕ್ಯಾನಿಕ್ – 12 ಹುದ್ದೆಗಳು

ಇದನ್ನೂ ಓದಿ: Jobs: ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದಲ್ಲಿನ 130 ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಶೈಕ್ಷಣಿಕ ಅರ್ಹತೆ

ಫಿಟ್ಟರ್, ಎಲೆಕ್ಟ್ರಿಷಿಯನ್ ಮತ್ತು ಎಲೆಕ್ಟ್ರಾನಿಕ್ ಮೆಕ್ಯಾನಿಕ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂಧಿತ ವ್ಯಾಪಾರದಲ್ಲಿ ITI ಪದವಿಯನ್ನು ಹೊಂದಿರಬೇಕು.

ವಯಸ್ಸಿನ ಮಿತಿ ಮತ್ತು ಆಯ್ಕೆ ಪ್ರಕ್ರಿಯೆ

ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು 14 ವರ್ಷದಿಂದ 24 ವರ್ಷ ವಯಸ್ಸಿನವರಾಗಿರಬೇಕು. ಅರ್ಜಿದಾರರ ವಯಸ್ಸನ್ನು ಜೂನ್ 16 2022 ರಿಂದ ಲೆಕ್ಕಹಾಕಲಾಗುತ್ತದೆ. OBC ಮತ್ತು SC/ST ಅಭ್ಯರ್ಥಿಗಳಿಗೆ ವಯಸ್ಸಿನ ಸಡಿಲಿಕೆ ಲಭ್ಯವಿದೆ. ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಸಿದ್ಧಪಡಿಸಲಾದ ಮೆರಿಟ್ ಅನ್ನು ಆಧರಿಸಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಇದನ್ನೂ ಓದಿ: Assam Rifles Recruitment 2022: 10ನೇ ಮತ್ತು ಪಿಯುಸಿ ಪಾಸಾದವರಿಂದ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ npcilcareers.co.in ನಲ್ಲಿ ಸಂಬಂಧಿಸಿದ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅಗತ್ಯ ವಿವರಗಳು ಮತ್ತು ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕಾಗುತ್ತದೆ. ನಂತರ ಅರ್ಜಿ ಶುಲ್ಕವನ್ನು ಪಾವತಿಸಿ ಮತ್ತು ಜೂನ್ 16 ರ ಮೊದಲು ಅರ್ಜಿ ನಮೂನೆಯನ್ನು ಸಲ್ಲಿಸಿ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:23 pm, Sun, 12 June 22

ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ