RITES Recruitment 2025: RITES ನಲ್ಲಿ ಸೀನಿಯರ್ ರೆಸಿಡೆಂಟ್ ಎಂಜಿನಿಯರ್ ಹುದ್ದೆಗಳಿಗೆ ನೇಮಕಾತಿ
ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆ (RITES) ಸಂಸ್ಥೆಯು ಸೀನಿಯರ್ ರೆಸಿಡೆಂಟ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಪದವಿ/ಡಿಪ್ಲೊಮಾ ಹೊಂದಿರುವ ಮತ್ತು 63 ವರ್ಷದೊಳಗಿನ ಅಭ್ಯರ್ಥಿಗಳು ಮಾರ್ಚ್ 13 ರೊಳಗೆ ಆನ್‌ಲೈನ್/ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ ಮತ್ತು ಸಂದರ್ಶನವನ್ನು ಒಳಗೊಂಡಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.

ಕೇಂದ್ರ ಸರ್ಕಾರದ ರೈಲ್ವೆ ಇಲಾಖೆ ವ್ಯಾಪ್ತಿಯ ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆ (RITES) ಅಧಿಕೃತ ಅಧಿಸೂಚನೆಯ ಮೂಲಕ ಸೀನಿಯರ್ ರೆಸಿಡೆಂಟ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಗುರುಗ್ರಾಮ್, ಸೋನಿಪತ್ – ಹರಿಯಾಣ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಮಾರ್ಚ್ 13ರ ಮೊದಲು ಅರ್ಜಿ ಸಲ್ಲಿಸಬಹುದು.
ಅರ್ಹತಾ ವಿವರಗಳು:
- ಶೈಕ್ಷಣಿಕ ಅರ್ಹತೆ: RITES ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಪದವಿ, ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
- ವಯಸ್ಸಿನ ಮಿತಿ: ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 63 ವರ್ಷಗಳು.
- ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಇದನ್ನೂ ಓದಿ: ವೈದ್ಯಕೀಯ ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿದ್ದೀರಾ? ಉಪಯುಕ್ತ ಮಾಹಿತಿ ಇಲ್ಲಿದೆ
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು rites.com ನ ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಬಳಿಕ ಒಂದು ಅರ್ಜಿ ಪ್ರತಿಯನ್ನು ಪಡೆದು ದಾಖಲೆಗಳಿಗೆ ಸ್ವಯಂ ದೃಢೀಕರಣ ಮಾಡಿ ಅದನ್ನು ರೈಟ್ಸ್ ಪ್ರಧಾನ ಕಚೇರಿ ವಿಳಾಸ ”ರೈಟ್ಸ್ ಲಿಮಿಟೆಡ್, ಶಿಖರ್, ಪ್ಲಾಟ್ ನಂಬರ್ 1, ಸೆಕ್ಟಾರ್ -29, ಗುರ್‌ಗಾವ್ – 122001” ಕ್ಕೆ ಕಳುಹಿಸಬೇಕು. ವಿವರವಾದ ಸಿವಿಗಳನ್ನು shweta.meena@rites.com ಗೆ ಸಹ ಮೇಲ್ ಮಾಡಬಹುದು.
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:50 pm, Fri, 7 March 25