AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRB Recruitment 2026: ರೈಲ್ವೆ ಇಲಾಖೆಯಲ್ಲಿ ನೇಮಕಾತಿ; 11,127 ಸಹಾಯಕ ಲೋಕೋ ಪೈಲಟ್ ಹುದ್ದೆಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ನೇಮಕಾತಿ ಮಂಡಳಿ (RRB) 11,127 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. 10ನೇ ತರಗತಿ, ITI/ಡಿಪ್ಲೊಮಾ ಹೊಂದಿದ 18-30 ವಯಸ್ಸಿನವರು ಅರ್ಜಿ ಸಲ್ಲಿಸಬಹುದು. CBT ಪರೀಕ್ಷೆ ಮೂಲಕ ಆಯ್ಕೆ. ಮೇ 15 ರಿಂದ ಜೂನ್ 14 ರವರೆಗೆ ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಅವಕಾಶ. ಇದು ಕೇಂದ್ರ ಸರ್ಕಾರದ ಆಕರ್ಷಕ ಉದ್ಯೋಗಾವಕಾಶ.

RRB Recruitment 2026: ರೈಲ್ವೆ ಇಲಾಖೆಯಲ್ಲಿ ನೇಮಕಾತಿ; 11,127 ಸಹಾಯಕ ಲೋಕೋ ಪೈಲಟ್  ಹುದ್ದೆಗೆ ಅರ್ಜಿ ಆಹ್ವಾನ
ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ
ಅಕ್ಷತಾ ವರ್ಕಾಡಿ
|

Updated on: Apr 28, 2026 | 5:06 PM

Share

ಭಾರತೀಯ ರೈಲ್ವೆ ಸಚಿವಾಲಯದ ಅಡಿಯಲ್ಲಿ ಬರುವ ರೈಲ್ವೆ ನೇಮಕಾತಿ ಮಂಡಳಿಯು (RRB) ದೇಶಾದ್ಯಂತ ಖಾಲಿ ಇರುವ ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 11,127 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಬೆಂಗಳೂರು, ಮುಂಬೈ, ಚೆನ್ನೈ, ಸಿಕಂದರಾಬಾದ್ ಸೇರಿದಂತೆ ದೇಶದ ಪ್ರಮುಖ ರೈಲ್ವೆ ವಲಯಗಳಲ್ಲಿ ಕೆಲಸ ಮಾಡಲು ಅರ್ಹ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶ ಲಭಿಸಿದೆ.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಉತ್ತೀರ್ಣರಾಗಿರಬೇಕು. ಇದರೊಂದಿಗೆ ಸಂಬಂಧಿತ ಟ್ರೇಡ್‌ಗಳಲ್ಲಿ ಐಟಿಐ (ITI) ಅಥವಾ ಡಿಪ್ಲೊಮಾ ಪೂರ್ಣಗೊಳಿಸಿರುವುದು ಕಡ್ಡಾಯವಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಜುಲೈ 1, 2026 ಕ್ಕೆ ಅನ್ವಯವಾಗುವಂತೆ 18 ರಿಂದ 30 ವರ್ಷಗಳ ಒಳಗಿರಬೇಕು. ನಿಯಮಾನುಸಾರ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ವಿಧಾನ ಮತ್ತು ವೇತನ ಶ್ರೇಣಿ:

ಅಭ್ಯರ್ಥಿಗಳನ್ನು ಎರಡು ಹಂತದ ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆಗಳ (CBT 1 ಮತ್ತು CBT 2) ಮೂಲಕ ಆಯ್ಕೆ ಮಾಡಲಾಗುತ್ತದೆ. ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ದಾಖಲೆ ಪರಿಶೀಲನೆ ನಡೆಸಲಾಗುವುದು. ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಆರಂಭಿಕ ವೇತನವಾಗಿ ರೂ. 19,900 ರೊಂದಿಗೆ ರೈಲ್ವೆ ಇಲಾಖೆಯ ನಿಯಮದಂತೆ ಇತರೆ ಭತ್ಯೆಗಳನ್ನು ನೀಡಲಾಗುವುದು. ಇದು ಕೇಂದ್ರ ಸರ್ಕಾರದ ಉದ್ಯೋಗವಾಗಿದ್ದು, ಆಕರ್ಷಕ ಸೌಲಭ್ಯಗಳನ್ನು ಒಳಗೊಂಡಿರುತ್ತದೆ.

ಇದನ್ನೂ ಓದಿ: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!

ಅರ್ಜಿ ಸಲ್ಲಿಸುವ ವಿಧಾನ ಮತ್ತು ದಿನಾಂಕ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಪ್ರಕ್ರಿಯೆಯು ಮೇ 15, ರಿಂದ ಅಧಿಕೃತವಾಗಿ ಪ್ರಾರಂಭವಾಗಲಿದ್ದು, ಆಸಕ್ತರು ಜೂನ್ 14 ರೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಕೊನೆಯ ಕ್ಷಣದ ತಾಂತ್ರಿಕ ತೊಂದರೆಗಳನ್ನು ತಪ್ಪಿಸಲು ಅಭ್ಯರ್ಥಿಗಳು ಮೊದಲೇ ಅರ್ಜಿ ಸಲ್ಲಿಸುವುದು ಸೂಕ್ತ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಹುಡುಗಿಗಾಗಿ ಟವರ್ ಏರಿದ್ದ ಯವಕನನ್ನ ಮನವೊಲಿಸಿ ಕೆಳಗಿಳಿಸಿದ್ಹೇಗೆ?
ಹುಡುಗಿಗಾಗಿ ಟವರ್ ಏರಿದ್ದ ಯವಕನನ್ನ ಮನವೊಲಿಸಿ ಕೆಳಗಿಳಿಸಿದ್ಹೇಗೆ?
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ