RRB Recruitment 2026: ಭಾರತೀಯ ರೈಲ್ವೆ ಇಲಾಖೆಯಲ್ಲಿ 11ಸಾವಿರಕ್ಕೂ ಅಧಿಕ ಭರ್ಜರಿ ನೇಮಕಾತಿ; 10th ಪಾಸಾಗಿದ್ರೆ ಸಾಕು!

ಭಾರತೀಯ ರೈಲ್ವೆಯು 11,127 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 10ನೇ ತರಗತಿ ಜೊತೆಗೆ ITI/ಡಿಪ್ಲೋಮಾ ಮಾಡಿದ 18-30 ವಯಸ್ಸಿನವರು ಅರ್ಜಿ ಸಲ್ಲಿಸಬಹುದು. ಮೇ 15 ರಿಂದ ಜೂನ್ 14 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ. CBT, ಆಪ್ಟಿಟ್ಯೂಡ್ ಪರೀಕ್ಷೆಗಳ ಮೂಲಕ ಆಯ್ಕೆ ನಡೆಯುತ್ತದೆ. ಉತ್ತಮ ಭವಿಷ್ಯಕ್ಕಾಗಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

RRB Recruitment 2026: ಭಾರತೀಯ ರೈಲ್ವೆ ಇಲಾಖೆಯಲ್ಲಿ 11ಸಾವಿರಕ್ಕೂ ಅಧಿಕ ಭರ್ಜರಿ ನೇಮಕಾತಿ; 10th ಪಾಸಾಗಿದ್ರೆ ಸಾಕು!
ರೈಲ್ವೆ ನೇಮಕಾತಿ

Updated on: Mar 27, 2026 | 12:32 PM

ಭಾರತೀಯ ರೈಲ್ವೆ ನೇಮಕಾತಿ ಮಂಡಳಿಯು (RRB) ದೇಶದಾದ್ಯಂತ ಯುವಜನತೆಗೆ ದೊಡ್ಡ ಮಟ್ಟದ ಉದ್ಯೋಗಾವಕಾಶವನ್ನು ಕಲ್ಪಿಸಿದೆ. ರೈಲ್ವೆ ಇಲಾಖೆಯ ವಿವಿಧ ವಲಯಗಳಲ್ಲಿ ಖಾಲಿ ಇರುವ ಒಟ್ಟು 11,127 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಈ ನೇಮಕಾತಿಯು ಬೆಂಗಳೂರು, ಸಿಕಂದರಾಬಾದ್, ಮುಂಬೈ, ಚೆನ್ನೈ ಸೇರಿದಂತೆ ದೇಶದ ಪ್ರಮುಖ 21 ರೈಲ್ವೆ ಮಂಡಳಿಗಳ ವ್ಯಾಪ್ತಿಯಲ್ಲಿ ನಡೆಯಲಿದ್ದು, ಬೃಹತ್ ಸಂಖ್ಯೆಯ ಹುದ್ದೆಗಳು ಲಭ್ಯವಿರುವುದು ವಿಶೇಷವಾಗಿದೆ.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:

ಈ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಪಾಸಾಗಿರಬೇಕು. ಇದರೊಂದಿಗೆ ಸಂಬಂಧಪಟ್ಟ ಟ್ರೇಡ್‌ಗಳಲ್ಲಿ ಐಟಿಐ (ITI) ಅಥವಾ ಡಿಪ್ಲೊಮಾ ವಿದ್ಯಾರ್ಹತೆಯನ್ನು ಹೊಂದಿರುವುದು ಕಡ್ಡಾಯವಾಗಿದೆ. ಅಭ್ಯರ್ಥಿಗಳ ವಯೋಮಿತಿಯನ್ನು ಜುಲೈ 1, 2026 ಕ್ಕೆ ಅನ್ವಯವಾಗುವಂತೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷಗಳ ನಡುವೆ ನಿಗದಿಪಡಿಸಲಾಗಿದೆ. ಸರ್ಕಾರದ ನಿಯಮದಂತೆ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್ ನೇಮಕಾತಿ; 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮತ್ತು ದಿನಾಂಕಗಳು:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯು ಮೇ 15 ರಿಂದ ಆರಂಭವಾಗಲಿದ್ದು, ಆಸಕ್ತರು ಜೂನ್ 14 ರೊಳಗೆ ತಮ್ಮ ವಿವರಗಳನ್ನು ಸಲ್ಲಿಸಬೇಕಾಗುತ್ತದೆ. ಆರಂಭಿಕ ವೇತನವು ತಿಂಗಳಿಗೆ ರೂ. 19,900 ರಿಂದ ಪ್ರಾರಂಭವಾಗಲಿದ್ದು, ಇದರೊಂದಿಗೆ ಕೇಂದ್ರ ಸರ್ಕಾರದ ಇತರೆ ಎಲ್ಲಾ ಭತ್ಯೆಗಳು ಮತ್ತು ಸೌಲಭ್ಯಗಳು ಆಯ್ಕೆಯಾದ ಸಿಬ್ಬಂದಿಗೆ ಲಭ್ಯವಿರಲಿವೆ.

ಆಯ್ಕೆ ವಿಧಾನ ಮತ್ತು ಪರೀಕ್ಷೆ:

ಸಹಾಯಕ ಲೋಕೋ ಪೈಲಟ್ ಹುದ್ದೆಗೆ ಆಯ್ಕೆಯಾಗಲು ಅಭ್ಯರ್ಥಿಗಳು ವಿವಿಧ ಹಂತದ ಪರೀಕ್ಷೆಗಳನ್ನು ಎದುರಿಸಬೇಕಾಗುತ್ತದೆ. ಇದರಲ್ಲಿ ಮೊದಲ ಮತ್ತು ಎರಡನೇ ಹಂತದ ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆಗಳು (CBT 1 & 2), ಕಂಪ್ಯೂಟರ್ ಆಧಾರಿತ ಆಪ್ಟಿಟ್ಯೂಡ್ ಟೆಸ್ಟ್, ಮೂಲ ದಾಖಲೆಗಳ ಪರಿಶೀಲನೆ ಹಾಗೂ ಕಟ್ಟುನಿಟ್ಟಾದ ವೈದ್ಯಕೀಯ ಪರೀಕ್ಷೆಗಳು ಒಳಗೊಂಡಿರುತ್ತವೆ. ಈ ಎಲ್ಲಾ ಹಂತಗಳಲ್ಲಿ ಯಶಸ್ವಿಯಾದ ಅಭ್ಯರ್ಥಿಗಳನ್ನು ಅಂತಿಮವಾಗಿ ಹುದ್ದೆಗೆ ಪರಿಗಣಿಸಲಾಗುತ್ತದೆ. ಪರೀಕ್ಷಾ ಪಠ್ಯಕ್ರಮ ಮತ್ತು ಅರ್ಜಿ ಶುಲ್ಕದ ಬಗ್ಗೆ ಹೆಚ್ಚಿನ ಮಾಹಿತಿ ಶೀಘ್ರದಲ್ಲೇ ಪೂರ್ಣ ಪ್ರಮಾಣದ ಅಧಿಸೂಚನೆಯಲ್ಲಿ ಪ್ರಕಟವಾಗಲಿದೆ.

ಅಧಿಕೃತ ವೆಬ್​ಸೈಟ್​ ಲಿಂಕ್​ಗಾಗಿ ಇಲ್ಲಿ ಕ್ಲಿಕ್​ ಮಾಡಿ

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us