
ರೈಲ್ವೆ ನೇಮಕಾತಿ ಮಂಡಳಿ (RRB) ಪ್ಯಾರಾಮೆಡಿಕಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಿದೆ. ಈ ಹಿಂದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 8 ಆಗಿತ್ತು. ಆದರೆ ಈಗ ಸೆಪ್ಟೆಂಬರ್ 18ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಕುರಿತು ಅಧಿಸೂಚನೆಯನ್ನು ಸಹ ಬಿಡುಗಡೆ ಮಾಡಿದೆ.
ಆರ್‌ಆರ್‌ಬಿ ಪ್ಯಾರಾಮೆಡಿಕಲ್ ನೇಮಕಾತಿ ಅಡಿಯಲ್ಲಿ, ನರ್ಸಿಂಗ್ ಸೂಪರಿಂಟೆಂಡೆಂಟ್, ಫಾರ್ಮಾಸಿಸ್ಟ್, ಲ್ಯಾಬ್ ಅಸಿಸ್ಟೆಂಟ್, ಇಸಿಜಿ ಟೆಕ್ನಿಷಿಯನ್, ರೇಡಿಯೋಗ್ರಾಫರ್, ಡಯಾಲಿಸಿಸ್ ಟೆಕ್ನಿಷಿಯನ್ ಮತ್ತು ಹೆಲ್ತ್ ಮತ್ತು ಮಲೇರಿಯಾ ಇನ್ಸ್‌ಪೆಕ್ಟರ್ ಸೇರಿದಂತೆ ಒಟ್ಟು 434 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಈ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವ ಅರ್ಹತೆಗಳನ್ನು ಹೊಂದಿರಬೇಕು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.
ಫಾರ್ಮಸಿಸ್ಟ್ ಹುದ್ದೆಗೆ, ಅರ್ಜಿದಾರರು ಫಾರ್ಮಸಿಯಲ್ಲಿ ಡಿಪ್ಲೊಮಾ ಅಥವಾ ಪದವಿ ಪಡೆದಿರಬೇಕು. ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗೆ, ಅರ್ಜಿದಾರರು GNM ಅಥವಾ B.Sc ನರ್ಸಿಂಗ್‌ನಲ್ಲಿ ಪದವಿ ಪಡೆದಿರಬೇಕು. ಲ್ಯಾಬ್ ಅಸಿಸ್ಟೆಂಟ್ ಹುದ್ದೆಗೆ, ಡಿಪ್ಲೊಮಾ ಇನ್ ಮೆಡಿಕಲ್ ಲ್ಯಾಬ್ ಟೆಕ್ನಾಲಜಿ (DMLT) ಕಡ್ಡಾಯವಾಗಿದೆ. ಇತರ ಹುದ್ದೆಗಳಿಗೆ ಅರ್ಹತೆಗೆ ಸಂಬಂಧಿಸಿದ ಮಾಹಿತಿಗಾಗಿ, ಅಭ್ಯರ್ಥಿಗಳು RRB ಹೊರಡಿಸಿದ ನೇಮಕಾತಿ ಜಾಹೀರಾತನ್ನು ಪರಿಶೀಲಿಸಬಹುದು.
ನಿಗದಿತ ಹುದ್ದೆಗೆ ಅನುಗುಣವಾಗಿ ವಯೋಮಿತಿಯನ್ನು ಪ್ರತ್ಯೇಕಿಸಲಾಗಿದೆ. ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗೆ ಗರಿಷ್ಠ ವಯಸ್ಸು 40 ವರ್ಷಗಳು. ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಗಳ ಪ್ರಕಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ಸಾಮಾನ್ಯ / ಒಬಿಸಿ / ಇಡಬ್ಲ್ಯೂಎಸ್ ವರ್ಗದ ಅರ್ಜಿ ಶುಲ್ಕವನ್ನು 500 ರೂ.ಗೆ ನಿಗದಿಪಡಿಸಲಾಗಿದೆ. ಅದೇ ಸಮಯದಲ್ಲಿ, ಎಸ್‌ಸಿ / ಎಸ್‌ಟಿ / ಇಬಿಸಿ / ಮಹಿಳೆಯರು / ಅಲ್ಪಸಂಖ್ಯಾತರು / ಮಾಜಿ ಸೈನಿಕರ ವರ್ಗಕ್ಕೆ ಸೇರಿದ ಅರ್ಜಿದಾರರು 250 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಇದನ್ನೂ ಓದಿ: YouTube ನಿಂದ ಹಣ ಗಳಿಸುವುದು ಹೇಗೆ? 2 ದಿನಗಳ ಸರ್ಕಾರಿ ತರಬೇತಿಯಲ್ಲಿ ನೀವೂ ಪಾಲ್ಗೊಳ್ಳಿ
ಲಿಖಿತ ಪರೀಕ್ಷೆ ಇತ್ಯಾದಿಗಳ ಮೂಲಕ ಆಯ್ಕೆಯನ್ನು ಮಾಡಲಾಗುತ್ತದೆ. ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 44,900 ರೂ. ವೇತನ ದೊರೆಯಲಿದೆ. ಈ ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ, ಅಭ್ಯರ್ಥಿಗಳು RRB ಹೊರಡಿಸಿದ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬಹುದು.
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ