RRB Recruitment 2023: PUC ಪಾಸಾದವರಿಗೆ ರೈಲ್ವೆಯಲ್ಲಿದೆ ಉದ್ಯೋಗಾವಕಾಶ: ವೇತನ 36 ಸಾವಿರ ರೂ.
RRB Recruitment 2023: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು RRBಯ ಅಧಿಕೃತ ವೆಬ್ಸೈಟ್ rrbcdg.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
RRB Recruitment 2023: ಭಾರತೀಯ ರೈಲ್ವೆ ಇಲಾಖೆಯ ನೇಮಕಾತಿ ಮಂಡಳಿಯು (Railway Recruitment Board) ಖಾಲಿ ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಿದೆ. ಈ ಬಾರಿ ನೇಮಕಾತಿ ಅಡಿಯಲ್ಲಿ ಒಟ್ಟು 7784 ಟ್ರಾವೆಲಿಂಗ್ ಟಿಕೆಟ್ ಎಕ್ಸಾಮಿನರ್ (Travelling Ticket Examiner) ಹುದ್ದೆಗಳ ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು RRBಯ ಅಧಿಕೃತ ವೆಬ್ಸೈಟ್ rrbcdg.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಟ್ರಾವೆಲಿಂಗ್ ಟಿಕೆಟ್ ಎಕ್ಸಾಮಿನರ್ (TTE)- 7784 ಹುದ್ದೆಗಳು
ಅರ್ಹತಾ ಮಾನದಂಡಗಳು:
ಈ ಹುದ್ದೆಗಳಿಗೆ ಪಿಯುಸಿ, ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
- ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
- ಗರಿಷ್ಠ ವಯಸ್ಸಿನ ಮಿತಿ: 28 ವರ್ಷಗಳು
- ಮೀಸಲಾತಿ ವರ್ಗಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಇದನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 36 ಸಾವಿರ ರೂ. ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
- ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ (CBE)
- ದಾಖಲೆ ಪರಿಶೀಲನೆ (DV)
- ವೈದ್ಯಕೀಯ ಫಿಟ್ನೆಸ್ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಮಾರ್ಚ್ 10, 2023
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
Published On - 2:31 pm, Thu, 9 February 23