RRB Recruitment 2023: PUC ಪಾಸಾದವರಿಗೆ ರೈಲ್ವೆಯಲ್ಲಿದೆ ಉದ್ಯೋಗಾವಕಾಶ: ವೇತನ 36 ಸಾವಿರ ರೂ.

| Updated By: ಝಾಹಿರ್ ಯೂಸುಫ್

Updated on: Feb 09, 2023 | 2:32 PM

RRB Recruitment 2023: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು RRBಯ ಅಧಿಕೃತ ವೆಬ್​ಸೈಟ್ rrbcdg.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

RRB Recruitment 2023: PUC ಪಾಸಾದವರಿಗೆ ರೈಲ್ವೆಯಲ್ಲಿದೆ ಉದ್ಯೋಗಾವಕಾಶ: ವೇತನ 36 ಸಾವಿರ ರೂ.
RRB Recruitment 2023
Follow us on

RRB Recruitment 2023: ಭಾರತೀಯ ರೈಲ್ವೆ ಇಲಾಖೆಯ ನೇಮಕಾತಿ ಮಂಡಳಿಯು (Railway Recruitment Board) ಖಾಲಿ ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಿದೆ. ಈ ಬಾರಿ ನೇಮಕಾತಿ ಅಡಿಯಲ್ಲಿ ಒಟ್ಟು 7784 ಟ್ರಾವೆಲಿಂಗ್ ಟಿಕೆಟ್ ಎಕ್ಸಾಮಿನರ್ (Travelling Ticket Examiner) ಹುದ್ದೆಗಳ ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು RRBಯ ಅಧಿಕೃತ ವೆಬ್​ಸೈಟ್ rrbcdg.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

ಟ್ರಾವೆಲಿಂಗ್ ಟಿಕೆಟ್ ಎಕ್ಸಾಮಿನರ್ (TTE)- 7784 ಹುದ್ದೆಗಳು

ಇದನ್ನೂ ಓದಿ
Income Tax Recruitment 2023: ಸರ್ಕಾರಿ ಉದ್ಯೋಗ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
AIASL Recruitment 2023: ಏರ್​ ಇಂಡಿಯಾ ನೇಮಕಾತಿ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
Karnataka Post Office Recruitment 2023: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ
SBI Recruitment 2023: ಎಸ್​ಬಿಐ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಹತಾ ಮಾನದಂಡಗಳು:

ಈ ಹುದ್ದೆಗಳಿಗೆ ಪಿಯುಸಿ, ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

  • ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
  • ಗರಿಷ್ಠ ವಯಸ್ಸಿನ ಮಿತಿ: 28 ವರ್ಷಗಳು
  • ಮೀಸಲಾತಿ ವರ್ಗಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಇದನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 36 ಸಾವಿರ ರೂ. ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

  • ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ (CBE)
  • ದಾಖಲೆ ಪರಿಶೀಲನೆ (DV)
  • ವೈದ್ಯಕೀಯ ಫಿಟ್ನೆಸ್ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Also Read: Karnataka Post Office Recruitment 2023: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಮಾರ್ಚ್ 10, 2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

 

Published On - 2:31 pm, Thu, 9 February 23