AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSSB Recruitment 2025: ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ 1535 ಆಯುಷ್ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ

RSSB ರಾಜಸ್ಥಾನವು 1535 ಆಯುಷ್ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಆಯುರ್ವೇದ, ಹೋಮಿಯೋಪತಿ ಅಥವಾ ಯುನಾನಿ ಪದವೀಧರರು ಅಕ್ಟೋಬರ್ 10 ರಿಂದ ನವೆಂಬರ್ 8 ರವರೆಗೆ rssb.rajasthan.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ವಯೋಮಿತಿ 21-40 ವರ್ಷಗಳು. ಅರ್ಹತಾ ಮಾನದಂಡಗಳು, ಅರ್ಜಿ ಶುಲ್ಕ ಮತ್ತು ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಸಂಪೂರ್ಣ ವಿವರಗಳನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ.

RSSB Recruitment 2025: ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ 1535 ಆಯುಷ್ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ
Ayush Officer Recruitment
ಅಕ್ಷತಾ ವರ್ಕಾಡಿ
|

Updated on: Oct 11, 2025 | 5:37 PM

Share

ರಾಷ್ಟ್ರೀಯ ಆರೋಗ್ಯ ಮಿಷನ್ (ಆಯುರ್ವೇದ/ಹೋಮಿಯೋಪತಿ/ಯುನಾನಿ) ಅಡಿಯಲ್ಲಿ ಆಯುಷ್ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ರಾಜಸ್ಥಾನ ಸಿಬ್ಬಂದಿ ಆಯ್ಕೆ ಮಂಡಳಿ (RSSB) ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಅಕ್ಟೋಬರ್ 10 ರಂದು ಪ್ರಾರಂಭವಾಗಿದೆ. ಆಸಕ್ತ ಅಭ್ಯರ್ಥಿಗಳು ಆಯ್ಕೆ ಮಂಡಳಿಯ ಅಧಿಕೃತ ವೆಬ್‌ಸೈಟ್ rssb.rajasthan.gov.in ಗೆ ಭೇಟಿ ನೀಡುವ ಮೂಲಕ ನವೆಂಬರ್ 8 ರವರೆಗೆ ಅರ್ಜಿ ಸಲ್ಲಿಸಬಹುದು.ಆಯ್ಕೆ ಮಂಡಳಿಯು ಒಟ್ಟು 1535 ಆಯುಷ್ ಅಧಿಕಾರಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ .

ಅರ್ಜಿ ಸಲ್ಲಿಸಲು ಅರ್ಹತೆಗಳೇನು?

ರಾಜಸ್ಥಾನ ಆಯುಷ್ ಅಧಿಕಾರಿ ನೇಮಕಾತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಆಯುರ್ವೇದ (BAMS), ಹೋಮಿಯೋಪತಿ (BHMS), ಅಥವಾ ಯುನಾನಿ (BUMS) ಪದವಿಯನ್ನು ಹೊಂದಿರಬೇಕು. ವಯಸ್ಸಿನ ಮಿತಿ 21 ರಿಂದ 40 ವರ್ಷಗಳು. ಮೀಸಲು ವಿಭಾಗಗಳ ಅರ್ಜಿದಾರರಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯೂ ಲಭ್ಯವಿದೆ.

ಇದನ್ನೂ ಓದಿ: ಸರ್ಕಾರಿ ಬ್ಯಾಂಕ್‌ನಲ್ಲಿ ಉದ್ಯೋಗ ಪಡೆಯಲು ಸುವರ್ಣವಕಾಶ; ಡಿಗ್ರಿ ಪಾಸಾಗಿದ್ರೆ ಸಾಕು

ಯಾವ ವರ್ಗಕ್ಕೆ ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ ವರ್ಗದ (OBC/MBC) ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 600 ರೂ. ಉಳಿದ OBC/MBC, EWS, SC, ST (ರಾಜಸ್ಥಾನ ನಿವಾಸಿಗಳು) ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 400 ರೂ. ಅಂಗವಿಕಲ ಅಭ್ಯರ್ಥಿಗಳು ಸಹ 400 ರೂ. ಪಾವತಿಸಬೇಕಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

  • ಆಯ್ಕೆ ಮಂಡಳಿಯ ಅಧಿಕೃತ ವೆಬ್‌ಸೈಟ್ rssb.rajasthan.gov.in ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ನೀಡಲಾದ Apply ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
  • ವಿವರಗಳನ್ನು ನಮೂದಿಸುವ ಮೂಲಕ ನೋಂದಾಯಿಸಿ.
  • ಆಯುಷ್ ಆಫೀಸರ್ ಅಪ್ಲೈ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಫಾರ್ಮ್ ಅನ್ನು ಭರ್ತಿ ಮಾಡಿ ಮತ್ತು ದಾಖಲೆಗಳನ್ನು ಅಪ್‌ಲೋಡ್ ಮಾಡಿ.
  • ಅರ್ಜಿ ಶುಲ್ಕವನ್ನು ಪಾವತಿಸಿ ಸಲ್ಲಿಸಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ