SAIL Burnpur Hospital Recruitment 2022: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ (SAIL) ಪಶ್ಚಿಮ ಬಂಗಾಳದ ಬರ್ನ್ಪುರ್ ಆಸ್ಪತ್ರೆಯಲ್ಲಿ ವೃತ್ತಿಪರ ತರಬೇತಿ ಕಾರ್ಯಕ್ರಮದ ಅಡಿಯಲ್ಲಿ 45 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಭರ್ತಿ ಮಾಡಲಾಗುವ ಹುದ್ದೆಗಳೆಂದರೆ…
ವಿದ್ಯಾರ್ಹತೆ:
ಹತ್ತನೇ/ಡಿಪ್ಲೊಮಾ/ಪದವಿ ಅಥವಾ ತತ್ಸಮಾನ ಕೋರ್ಸ್ಗಳಲ್ಲಿ ತೇರ್ಗಡೆಯಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಲ್ಲದೆ ಆಯಾ ವಿಭಾಗದಲ್ಲಿ ಪರಿಣತಿ ಹೊಂದಿರುವ ಪ್ರಮಾಣ ಪತ್ರವನ್ನು ಹೊಂದಿರಬೇಕಾಗುತ್ತದೆ.
ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 30 ರಿಂದ 45 ವರ್ಷಗಳ ನಡುವೆ ಇರಬೇಕು.
ಅರ್ಜಿ ಸಲ್ಲಿಸುವುದು ಹೇಗೆ?
ಈ ವೆಬ್ಸೈಟ್ನಿಂದ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ. ಅದನ್ನು ಭರ್ತಿ ಮಾಡಿ burnpurhospital@gmail.com ಈಮೇಲ್ ವಿಳಾಸಕ್ಕೆ ಮೇಲ್ ಮಾಡಬೇಕು.
ವೇತನ:
ಈ ಹುದ್ದೆಗಳ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.15,020 ರಿಂದ ರೂ.25,000 ಸ್ಟೈಫಂಡ್ ನೀಡಲಾಗುತ್ತದೆ.
ಅರ್ಜಿ ಕಳುಹಿಸಬೇಕಾದ ವಿಳಾಸ:
Confluence, Opp. to Burnpur Post Office, Near Bharti Bhawan, P.O. Burnpur -713325, DT: Paschim Bardhaman, West Bengal.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.