SAIL Recruitment 2022: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದಲ್ಲಿದೆ 200 ಉದ್ಯೋಗಗಳು

| Updated By: ಝಾಹಿರ್ ಯೂಸುಫ್

Updated on: Aug 03, 2022 | 3:18 PM

SAIL Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SAIL ನ ಅಧಿಕೃತ ವೆಬ್‌ಸೈಟ್‌ sail.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

SAIL Recruitment 2022: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದಲ್ಲಿದೆ 200 ಉದ್ಯೋಗಗಳು
SAIL Recruitment 2022
Follow us on

SAIL Recruitment 2022: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (SAIL) ಹಲವಾರು ಟ್ರೈನಿ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SAIL ನ ಅಧಿಕೃತ ವೆಬ್‌ಸೈಟ್‌ sail.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

  • ಒಟ್ಟು ಹುದ್ದೆಗಳ ಸಂಖ್ಯೆ- 200
  • ವೈದ್ಯಕೀಯ ಅಟೆಂಡೆಂಟ್ ಟ್ರೈನಿ: 100 ಹುದ್ದೆಗಳು
  • ಕ್ರಿಟಿಕಲ್ ಕೇರ್ ನರ್ಸಿಂಗ್ ಟ್ರೈನಿ: 20 ಹುದ್ದೆಗಳು
  • ಸುಧಾರಿತ ವಿಶೇಷ ನರ್ಸಿಂಗ್ ಟ್ರೈನಿ (ASNT): 40 ಹುದ್ದೆಗಳು
  • ಡೇಟಾ ಎಂಟ್ರಿ ಆಪರೇಟರ್ / ಮೆಡಿಕಲ್ ಟ್ರಾನ್ಸ್​ಕ್ರಿಪ್ಷನ್ ಟ್ರೈನಿ: 6 ಹುದ್ದೆಗಳು
  • ವೈದ್ಯಕೀಯ ಲ್ಯಾಬ್ ಟ್ರೈನಿ: 10 ಹುದ್ದೆಗಳು
  • ಆಸ್ಪತ್ರೆ ಆಡಳಿತ ಟ್ರೈನಿ: 10 ಹುದ್ದೆಗಳು
  • ಒಟಿ/ಅನಸ್ತೇಶಿಯಾ ಸಹಾಯಕ ಟ್ರೈನಿ: 5 ಹುದ್ದೆಗಳು
  • ಸುಧಾರಿತ ಫಿಸಿಯೋಥೆರಪಿ ಟ್ರೈನಿ: 3 ಹುದ್ದೆಗಳು
  • ರೇಡಿಯೋಗ್ರಾಫರ್ ಟ್ರೈನಿ: 3 ಹುದ್ದೆಗಳು
  • ಫಾರ್ಮಾಸಿಸ್ಟ್ ಟ್ರೈನಿ: 3 ಹುದ್ದೆಗಳು

ಅರ್ಹತಾ ಮಾನದಂಡಗಳು:
ಆಯಾ ಹುದ್ದೆಗಳಿಗೆ ವಿಭಿನ್ನ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಇದನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ಇದನ್ನೂ ಓದಿ
Anganwadi Recruitment 2022: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
HAL Recruitment 2022: ಹೆಚ್​ಎಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Coal India MT Recruitment 2022: ಕೋಲ್ ಇಂಡಿಯಾದ 481 ಹುದ್ದೆಗಳಿಗೆ ಅರ್ಜಿ ಆಹ್ವಾನ
BBMP Recruitment 2022: ‘ನಮ್ಮ ಕ್ಲಿನಿಕ್’​ನಲ್ಲಿರುವ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 18 ವರ್ಷದಿಂದ 35 ವರ್ಷಗಳ ನಡುವೆ ಇರಬೇಕು.

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಸಂದರ್ಶನವನ್ನು ಒಳಗೊಂಡಿರುತ್ತದೆ. ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದಂದು ಸಂದರ್ಶನಕ್ಕೆ ಹಾಜರಾಗಬೇಕಾಗುತ್ತದೆ. ಸಂದರ್ಶನದ ಸ್ಥಳ, ದಿನಾಂಕ ಮತ್ತು ಸಮಯವನ್ನು ಅರ್ಜಿ ನಮೂನೆಯಲ್ಲಿ ನಮೂದಿಸಲಾದ ಅವರ ನೋಂದಾಯಿತ ಮೊಬೈಲ್ ಸಂಖ್ಯೆಗೆ SMS ಮೂಲಕ ಅರ್ಹ ಅಭ್ಯರ್ಥಿಗಳಿಗೆ ತಿಳಿಸಲಾಗುತ್ತದೆ.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ- ಆಗಸ್ಟ್ 5, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 20, 2022

ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು .
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.