SAIL Recruitment 2022: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದಲ್ಲಿನ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕಂಪನಿಯ ಅಧಿಕೃತ ವೆಬ್‌ಸೈಟ್ sail.ucanapply.com ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು:
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ಎಸ್ಎಲ್ಸಿಯಲ್ಲಿ ಪಾಸ್ ಆಗಿರಬೇಕು, ಜೊತೆಗೆ ಐಟಿಐ ಪ್ರಮಾಣಪತ್ರವನ್ನು ಹೊಂದಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 24 ವರ್ಷಗಳಿಗಿಂತ ಹೆಚ್ಚಿರಬಾರದು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಸೆಪ್ಟೆಂಬರ್ 30, 2022
ಆಯ್ಕೆ ಪ್ರಕ್ರಿಯೆ:
ಅರ್ಹ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಸ್ವೀಕರಿಸಿದ ಅರ್ಜಿಗಳಲ್ಲಿ ಗರಿಷ್ಠ ಮೆರಿಟ್ ಹೊಂದಿರುವ ಅಭ್ಯರ್ಥಿಗಳನ್ನು ಒಳಗೊಂಡಂತೆ ಅಂತಿಮ ಪಟ್ಟಿ ಸಿದ್ಧಪಡಿಸಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.