SAIL Recruitment 2022: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಉದ್ಯೋಗಾವಕಾಶ: ನೇರ ನೇಮಕಾತಿ
SAIL Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದಾದರೂ ಮಾನ್ಯತೆ ಪಡೆದ ಸಂಸ್ಥೆಯಿಂದ MBBS ಪದವಿಯನ್ನು ಪಡೆದಿರಬೇಕು.
SAIL Recruitment 2022: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (SAIL) ನಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಯುವ ವೈದ್ಯರಿಗೆ ಇಲ್ಲಿದೆ ಸುವರ್ಣಾವಕಾಶ. ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದಲ್ಲಿ ವೈದ್ಯರ ಹುದ್ದೆಗಳಿಗೆ ನೇಮಕಾತಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SAIL ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ನೇರ ನೇಮಕಾತಿ ನಡೆಯಲಿದ್ದು, ಫೆಬ್ರವರಿ 7, 2022 ರಂದು ಸಂದರ್ಶನ ಇರಲಿದೆ. ಈ ಹುದ್ದೆಗಳ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಖಾಲಿ ಇರುವ ಹುದ್ದೆಗಳ ವಿವರಗಳು: ಸೂಪರ್ ಸ್ಪೆಷಲಿಸ್ಟ್: 1 ಹುದ್ದೆ ಸ್ಪೆಷಲಿಸ್ಟ್: 7 ಹುದ್ದೆಗಳು ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್: 6 ಹುದ್ದೆಗಳು
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದಾದರೂ ಮಾನ್ಯತೆ ಪಡೆದ ಸಂಸ್ಥೆಯಿಂದ MBBS ಪದವಿಯನ್ನು ಪಡೆದಿರಬೇಕು.
ಆಯ್ಕೆ ಪ್ರಕ್ರಿಯೆ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕ: ನೇರ ಸಂದರ್ಶನ ದಿನಾಂಕ- ಫೆಬ್ರವರಿ 7, 2022
ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಮತ್ತು ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ: Dewald Brevis: ಜೆರ್ಸಿ ನಂಬರ್ 17, RCB ಫ್ಯಾನ್: ಯಾರು ಈ ಬೇಬಿ AB?
ಇದನ್ನೂ ಓದಿ: IPL 2022: ಐಪಿಎಲ್ ಸೀಸನ್ 15 ಭಾರತದಲ್ಲೇ, ಆದರೆ 2 ನಗರಗಳಲ್ಲಿ ಎಂಬುದೇ ವಿಶೇಷ..!
ಇದನ್ನೂ ಓದಿ: ICC U-19 World Cup: ಬೀದಿಯಲ್ಲಿ ಕ್ರೆಡಿಟ್ ಕಾರ್ಡ್ ಮಾರಿ ವಿಶ್ವಕಪ್ ಆಡುತ್ತಿರುವ ಕ್ರಿಕೆಟಿಗನ ಕಥೆಯಿದು