AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sania Chondhok: ಸಚಿನ್ ತೆಂಡೂಲ್ಕರ್ ಪುತ್ರನನ್ನು ವರಿಸಲಿರುವ ಸಾನಿಯಾ ಚಂದೋಕ್ ಯಾರು? ಆಕೆಯ ವಿದ್ಯಾರ್ಹತೆ ಏನು?

ಭಾರತದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರು ಸಾನಿಯಾ ಚಾಂದೋಕ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸಾನಿಯಾ ಮುಂಬೈನ ಪ್ರಸಿದ್ಧ ಉದ್ಯಮಿ ಕುಟುಂಬಕ್ಕೆ ಸೇರಿದವರು. ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ನಿಂದ ಪದವಿ ಪಡೆದ ಸಾನಿಯಾ ಇದೀಗ ತನ್ನದೇ ಆದ ಸ್ವಂತ ಪೆಟ್​​ ಸಲೂನ್ ಹೊಂದಿದ್ದಾರೆ. ಅರ್ಜುನ್, ಮುಂಬೈ ವಿಶ್ವವಿದ್ಯಾಲಯದ ಪದವೀಧರ ಮತ್ತು ಐಪಿಎಲ್ ಆಟಗಾರ. ಇವರಿಬ್ಬರ ಬಾಲ್ಯದ ಗೆಳೆತನ ಇದೀಗ ಪ್ರೀತಿಯಾಗಿ ಚಿರುಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

Sania Chondhok: ಸಚಿನ್ ತೆಂಡೂಲ್ಕರ್ ಪುತ್ರನನ್ನು ವರಿಸಲಿರುವ ಸಾನಿಯಾ ಚಂದೋಕ್ ಯಾರು? ಆಕೆಯ ವಿದ್ಯಾರ್ಹತೆ ಏನು?
Sania Chondhok
ಅಕ್ಷತಾ ವರ್ಕಾಡಿ
|

Updated on:Aug 14, 2025 | 5:48 PM

Share

ಭಾರತದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರು ಸಾನಿಯಾ ಚಂದೋಕ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಅರ್ಜುನ್ ತೆಂಡೂಲ್ಕರ್ ತಮ್ಮ ಬಾಲ್ಯದ ಗೆಳತಿ ಸಾನಿಯಾ ಅವರನ್ನು ವರಿಸಲಿದ್ದು, ಸದ್ಯ ಆಕೆಯ ಫೋಟೋಗಳ ಸೋಶಿಯಲ್​​ ಮೀಡಿಯಾಗಳಲ್ಲಿ ವೈರಲ್​​ ಆಗುತ್ತಿದೆ. ಹಾಗಾದರೆ ಸಾನಿಯಾ ಚಂದೋಕ್ ಯಾರು ಮತ್ತು ಆಕೆಯ ವಿದ್ಯಾರ್ಹತೆ ಏನು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಸಾನಿಯಾ ಚಾಂದೋಕ್ ಎಷ್ಟು ಓದಿದ್ದಾರೆ?

ವರದಿಗಳ ಪ್ರಕಾರ, ಸನ್ಯಾ ಚಾಂದೋಕ್ ತನ್ನ ಶಾಲಾ ಶಿಕ್ಷಣವನ್ನು ಮುಂಬೈನಲ್ಲಿ ಪೂರ್ಣಗೊಳಿಸಿದ್ದಾರೆ. ಬಳಿಕ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ನಿಂದ ಪದವಿ ಪಡೆದಿದ್ದಾರೆ. ತಮ್ಮ ಅಧ್ಯಯನವನ್ನು ಪೂರ್ಣಗೊಳಿಸಿದ ನಂತರ, ಮುಂಬೈನಲ್ಲಿ ಮಿಸ್ಟರ್ ಪಾವ್ಸ್ ಎಂಬ ಹೆಸರಿನ ಸಾಕುಪ್ರಾಣಿ ಸಲೂನ್, ಸ್ಪಾ ಪ್ರಾರಂಭಿಸಿದರು, ಇದು ಸಾಕುಪ್ರಾಣಿಗಳನ್ನು ನೋಡಿಕೊಳ್ಳಲು ಮತ್ತು ಅವುಗಳಿಗೆ ಐಷಾರಾಮಿ ಸೇವೆಗಳನ್ನು ಒದಗಿಸಲು ಹೆಸರುವಾಸಿಯಾಗಿದೆ. ಅವರು ನಾಯಿ ಪ್ರಿಯರೂ ಆಗಿದ್ದು, ಸಾಕುಪ್ರಾಣಿಗಳ ಆರೈಕೆದಾರರಾಗಿ ಕೆಲಸ ಮಾಡುತ್ತಾರೆ.

ಅರ್ಜುನ್ ತೆಂಡೂಲ್ಕರ್ ಶಿಕ್ಷಣ:

ಅರ್ಜುನ್ ತೆಂಡೂಲ್ಕರ್ ಮುಂಬೈನ ಧೀರೂಭಾಯಿ ಅಂಬಾನಿ ಅಂತರರಾಷ್ಟ್ರೀಯ ಶಾಲೆಯಲ್ಲಿ ಅಧ್ಯಯನ ಮಾಡಿ ಮುಂಬೈ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದಾರೆ. ಅರ್ಜುನ್ ತೆಂಡೂಲ್ಕರ್ ಎಡಗೈ ವೇಗದ ಬೌಲರ್ ಮತ್ತು ಆಲ್ ರೌಂಡರ್. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಗೋವಾ ಪರ ಆಡಿದ್ದಾರೆ. ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಡಿದ್ದಾರೆ. ಇಲ್ಲಿಯವರೆಗೆ ಐಪಿಎಲ್ ನಲ್ಲಿ ಅವರು 5 ಪಂದ್ಯಗಳಲ್ಲಿ 114 ರನ್ ಗಳಿಸಿದ್ದಾರೆ ಮತ್ತು 3 ವಿಕೆಟ್ ಪಡೆದಿದ್ದಾರೆ.

ಇದನ್ನೂ ಓದಿ: ವಿಶ್ವದ ಅತ್ಯುತ್ತಮ ಶಾಲೆಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಭಾರತದ ಏಕೈಕ ಶಿಕ್ಷಣ ಸಂಸ್ಥೆ ಯಾವುದು ಗೊತ್ತಾ?

ಸಾನಿಯಾ ಚಾಂದೋಕ್ ಯಾರು?

ಸನ್ಯಾ ಚಾಂದೋಕ್ ಮುಂಬೈನ ಪ್ರಸಿದ್ಧ ಬಿಸಿನೆಸ್​ ಕುಟುಂಬಕ್ಕೆ ಸೇರಿದವರು. ಅವರು ರವಿ ಘಾಯ್ ಅವರ ಮೊಮ್ಮಗಳು, ಅವರ ಕುಟುಂಬವು ಇಂಟರ್ ಕಾಂಟಿನೆಂಟಲ್ ಮೆರೈನ್ ಡ್ರೈವ್ ಹೋಟೆಲ್ ಅನ್ನು ಹೊಂದಿದೆ. ಘಾಯ್ ಕುಟುಂಬದ ವ್ಯವಹಾರವು ಹೋಟೆಲ್‌ಗಳಿಗೆ ಮಾತ್ರ ಸೀಮಿತವಾಗಿಲ್ಲ, ಆದರೆ ಅವರು ಪ್ರಸಿದ್ಧ ಐಸ್ ಕ್ರೀಮ್ ಬ್ರ್ಯಾಂಡ್ ಅನ್ನು ಸಹ ಹೊಂದಿದ್ದಾರೆ. ಅವರು ಗ್ರಾವಿಸ್ ಗೂಡ್ಸ್ ಫುಡ್‌ನಂತಹ ಇತರ ಅನೇಕ ಕಂಪನಿಗಳನ್ನು ಸಹ ಹೊಂದಿದ್ದಾರೆ.

ಶಿಕ್ಷಣಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 4:59 pm, Thu, 14 August 25

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್