SBI Apprentice Recruitment 2021: ಅಪ್ರೆಂಟಿಸ್ ನೇಮಕಾತಿಗೆ ಅರ್ಜಿ ಆಹ್ವಾನಿಸಿದ ಎಸ್ಬಿಐ; ಪರೀಕ್ಷೆ, ಶುಲ್ಕದ ವಿವರ ಇಲ್ಲಿದೆ
ಮಾನ್ಯತೆ ಪಡೆದ ವಿಶ್ವವಿದ್ಯಾಲಯ, ಶೈಕ್ಷಣಿಕ ಸಂಸ್ಥೆಯಿಂದ ಪದವಿ ಪಡೆದಿರುವ 20-28ವರ್ಷದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಅಪ್ರೆಂಟಿಸ್ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 6100 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು sbi.co.in. ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದು. ಜುಲೈ 26 ಅರ್ಜಿ ಸಲ್ಲಿಸಲು ಕೊನೇ ದಿನಾಂಕವಾಗಿದೆ. ಒಬ್ಬ ಅಭ್ಯರ್ಥಿ ಒಂದೇ ರಾಜ್ಯದಲ್ಲಿ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಇದರಡಿಯಲ್ಲಿ ಒಮ್ಮೆ ಮಾತ್ರ ಪರೀಕ್ಷೆ ಬರೆಯಬಹುದಾಗಿದೆ.
ಅರ್ಹತೆಗಳೇನಿರಬೇಕು? ಮಾನ್ಯತೆ ಪಡೆದ ವಿಶ್ವವಿದ್ಯಾಲಯ, ಶೈಕ್ಷಣಿಕ ಸಂಸ್ಥೆಯಿಂದ ಪದವಿ ಪಡೆದಿರುವ 20-28ವರ್ಷದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಎಸ್‌ಸಿ/ಎಸ್‌ಟಿ/ಒಬಿಸಿ/ ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ, ಗರಿಷ್ಠ ವಯಸ್ಸಿನ ಮಿತಿಯಲ್ಲಿ ರಿಯಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ ಹೇಗೆ? ಆನ್ಲೈನ್ ಲಿಖಿತ ಪರೀಕ್ಷೆಗಳು ಮತ್ತು ಸ್ಥಳೀಯ ಭಾಷೆಗಳ ಪರೀಕ್ಷೆಗಳ ಮೂಲಕ ಅಪ್ರೆಂಟಿಸ್ ನೇಮಕಾತಿ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ಆಬ್ಜೆಕ್ಟಿವ್ ಪರೀಕ್ಷೆಗಳಲ್ಲಿ ತಪ್ಪು ಉತ್ತರಗಳಿಗೆ ನಕಾರಾತ್ಮಕ ಅಂಕಗಳು ಇರುತ್ತವೆ. ಆನ್ಲೈನ್ ಪರೀಕ್ಷೆಗಳು ಆಗಸ್ಟ್ನಲ್ಲಿ ನಡೆಯಲಿವೆ.
ಅರ್ಜಿ ಶುಲ್ಕದ ವಿವರ ಎಸ್ಬಿಐನ ಈ ಹುದ್ದೆಗೆ ಅರ್ಜಿ ಸಲ್ಲಿಸುವವರು 300 ರೂಪಾಯಿ ಶುಲ್ಕ ತುಂಬಬೇಕು. ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಡಿ ವರ್ಗಕ್ಕೆ ಸೇರಿದವರು ಯಾವುದೇ ಶುಲ್ಕ ತುಂಬುವ ಅಗತ್ಯ ಇರುವುದಿಲ್ಲ.
ಇದನ್ನೂ ಓದಿ: Nokia G20: ನೋಕಿಯಾ ಜಿ20 ಭಾರತದಲ್ಲಿ ಬಿಡುಗಡೆ; ವೈಶಿಷ್ಟ್ಯ, ಬೆಲೆ ಮತ್ತು ವಿಶೇಷತೆಗಳೇನು?
SBI Apprentice Recruitment 2021 State Bank of India has invited applications from candidates