AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI Clerk Recruitment 2024: SBIಯಲ್ಲಿ ಖಾಲಿಯಿರುವ 13,735 ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಜೂನಿಯರ್ ಅಸೋಸಿಯೇಟ್ಸ್ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, 13,735 ಕ್ಲರ್ಕ್ ಹುದ್ದೆಗಳು ಖಾಲಿಯಿದೆ. ಕರ್ನಾಟಕ ವಲಯದಲ್ಲಿ 50 ಹುದ್ದೆಗಳು ಖಾಲಿಯಿದ್ದು, ಡಿಸೆಂಬರ್ 17 ರಂದು ಅಂದರೆ ಇಂದಿನಿಂದ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಆರಂಭಗೊಂಡಿದೆ. ಎಸ್ ಬಿಐ ಕ್ಲರ್ಕ್‌ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅಗತ್ಯವಿರುವ ಅರ್ಹತೆಗಳು, ವೇತನ ಶ್ರೇಣಿ, ವಯಸ್ಸಿನ ಮಿತಿ ಹಾಗೂ ಆಯ್ಕೆ ಪ್ರಕ್ರಿಯೆ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.

SBI Clerk Recruitment 2024: SBIಯಲ್ಲಿ ಖಾಲಿಯಿರುವ 13,735 ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ
SBI (ಸಾಂದರ್ಭಿಕ ಚಿತ್ರ)
ಸಾಯಿನಂದಾ
| Edited By: |

Updated on: Dec 17, 2024 | 3:09 PM

Share

ಬ್ಯಾಂಕ್ ನಲ್ಲಿ ಉದ್ಯೋಗ ಮಾಡಲು ಆಸಕ್ತಿಯಿದ್ದು, ಅವಕಾಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಸಿಹಿ ಸುದ್ದಿಯಿದೆ. ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಖಾಲಿಯಿರುವ ಜೂನಿಯರ್ ಅಸೋಸಿಯೇಟ್ಸ್ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಡಿಸೆಂಬರ್ 17 ರಿಂದ ಅರ್ಜಿ ಸಲ್ಲಿಸುವ ಪಕ್ರಿಯೆಯೂ ಆರಂಭಗೊಂಡಿದ್ದು, ಜನವರಿ 7, 2025 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ

* ನೇಮಕಾತಿ ಬ್ಯಾಂಕ್ ಹೆಸರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ

* ಹುದ್ದೆ ಹೆಸರು : ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್‌ ಮತ್ತು ಸೇಲ್ಸ್‌)

* ಹುದ್ದೆಗಳ ಸಂಖ್ಯೆ : 13,735

* ಕರ್ನಾಟಕದಲ್ಲಿ ಜೂನಿಯರ್ ಅಸೋಸಿಯೇಟ್ಸ್‌ ಹುದ್ದೆಗಳ ಸಂಖ್ಯೆ : 50

* ವೇತನಶ್ರೇಣಿ : ಮಾಸಿಕ ಆರಂಭಿಕ ವೇತನ ರೂ 26730 /-

ಶೈಕ್ಷಣಿಕ ಅರ್ಹತೆ

* ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಬ್ಯಾಚುಲರ್ ಪದವಿಯನ್ನು ಪಡೆದಿರಬೇಕು. ಅಭ್ಯರ್ಥಿಗಳು ತಾವು ಅರ್ಜಿ ಸಲ್ಲಿಸುತ್ತಿರುವ ರಾಜ್ಯದ ಸ್ಥಳೀಯ ಭಾಷೆಯನ್ನು ಬಲ್ಲವರಾಗಿರಬೇಕು.

ವಯಸ್ಸಿನ ಮಿತಿ

* ಎಸ್ ಬಿಐ ನಲ್ಲಿ ಖಾಲಿಯಿರುವ ಕ್ಲರ್ಕ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷ ಹಾಗೂ ಗರಿಷ್ಠ ವಯಸ್ಸು 28 ವರ್ಷ ಮೀರಿರಬಾರದು. ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೂ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ

* ಸಾಮಾನ್ಯ/ಒಬಿಸಿ/ಇಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳು ರೂ 750 ಅರ್ಜಿ ಶುಲ್ಕವನ್ನು ಪಾವತಿಸಬೇಕು.

* ಪರಿಶಿಷ್ಟ ಜಾತಿ ಹಾಗೂ ಪಂಗಡ, ಅಂಗವಿಕಲ ವರ್ಗ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ಆಯ್ಕೆ ವಿಧಾನ

* ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪೂರ್ವಭಾವಿ ಪರೀಕ್ಷೆ/ ಮುಖ್ಯ ಪರೀಕ್ಷೆ ಹಾಗೂ ಭಾಷಾ ಪ್ರಾವಿಣ್ಯತೆ ಆಧಾರದ ಮೇಲೆ ಮೇಲ್ಕಂಡ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು

* ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 17 ಡಿಸೆಂಬರ್ 2024

* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07 ಜನವರಿ 2025

* ಪೂರ್ವಭಾವಿ ಪರೀಕ್ಷೆಯ ಸಂಭಾವ್ಯ ದಿನಾಂಕ : 2025 ರ ಫೆಬ್ರವರಿ

* ಮುಖ್ಯ ಪರೀಕ್ಷೆಯ ಸಂಭಾವ್ಯ ದಿನಾಂಕ : 2025 ರ ಮಾರ್ಚ್‌ / ಏಪ್ರಿಲ್

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ