SBI Recruitment 2022: ಪದವೀಧರರಿಗೆ ಸುವರ್ಣಾವಕಾಶ: ವೇತನ 63 ಸಾವಿರ ರೂ.

SBI PO Recruitment: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SBI ನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

SBI Recruitment 2022: ಪದವೀಧರರಿಗೆ ಸುವರ್ಣಾವಕಾಶ: ವೇತನ 63 ಸಾವಿರ ರೂ.
SBI PO Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 22, 2022 | 4:45 PM

SBI PO Recruitment 2022: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಪ್ರೊಬೇಷನರಿ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SBI ನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 1673

ಅರ್ಹತಾ ಮಾನದಂಡಗಳು: ಈ ಹುದ್ದೆಗಳಿಗೆ ಯಾವುದೇ ಪದವಿ (ಡಿಗ್ರಿ) ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಅಂದರೆ ಪದವೀಧರರಿಗೆ ಮಾತ್ರ ಅವಕಾಶ ಇರಲಿದೆ. ಹಾಗೆಯೇ ಅಂತಿಮ ವರ್ಷದ ಪದವಿ ಮಾಡುತ್ತಿರುವ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು.

ವಯೋಮಿತಿ: ಈ ಹುದ್ದೆಗಳಿಗೆ 21 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ ಶ್ರೇಣಿ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 41 ಸಾವಿರದಿಂದ 63 ಸಾವಿರದವರೆಗೆ ವೇತನ ಸಿಗಲಿದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಮೂರು ಹಂತಗಳ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅಭ್ಯರ್ಥಿಗಳ ಆಯ್ಕೆಯ ಹಂತಗಳು ಈ ಕೆಳಗಿನಂತಿವೆ..

  • ಹಂತ 1: ಪೂರ್ವಭಾವಿ ಪರೀಕ್ಷೆ
  • ಹಂತ 2: ಮುಖ್ಯ ಪರೀಕ್ಷೆ
  • ಹಂತ 3: ಸೈಕೋಮೆಟ್ರಿಕ್ ಪರೀಕ್ಷೆ

ಪ್ರಮುಖ ದಿನಾಂಕಗಳು: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 12, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ