SBI PO Recruitment 2022: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಪ್ರೊಬೇಷನರಿ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SBI ನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 1673
ಅರ್ಹತಾ ಮಾನದಂಡಗಳು:
ಈ ಹುದ್ದೆಗಳಿಗೆ ಯಾವುದೇ ಪದವಿ (ಡಿಗ್ರಿ) ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಅಂದರೆ ಪದವೀಧರರಿಗೆ ಮಾತ್ರ ಅವಕಾಶ ಇರಲಿದೆ. ಹಾಗೆಯೇ ಅಂತಿಮ ವರ್ಷದ ಪದವಿ ಮಾಡುತ್ತಿರುವ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಈ ಹುದ್ದೆಗಳಿಗೆ 21 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 41 ಸಾವಿರದಿಂದ 63 ಸಾವಿರದವರೆಗೆ ವೇತನ ಸಿಗಲಿದೆ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಮೂರು ಹಂತಗಳ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅಭ್ಯರ್ಥಿಗಳ ಆಯ್ಕೆಯ ಹಂತಗಳು ಈ ಕೆಳಗಿನಂತಿವೆ..
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 12, 2022
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.