AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI Recruitment 2022-23: ಸ್ಟೇಟ್​ ಬ್ಯಾಂಕ್ ಆಫ್ ಇಂಡಿಯಾದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

SBI Recruitment 2022-23: ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SBI ನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

SBI Recruitment 2022-23: ಸ್ಟೇಟ್​ ಬ್ಯಾಂಕ್ ಆಫ್ ಇಂಡಿಯಾದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
SBI Recruitment 2022
TV9 Web
| Edited By: |

Updated on:Jan 02, 2023 | 2:36 PM

Share

SBI Recruitment 2022-23: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಕಲೆಕ್ಷನ್ ಫೆಸಿಲಿಟೇಟರ್, ಮ್ಯಾನೇಜರ್, ಕ್ರೆಡಿಟ್ ಅನಾಲಿಸ್ಟ್, ಸರ್ಕಲ್ ಅಡ್ವೈಸರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SBI ನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಯ ವಿವರಗಳು:

  • ಕಲೆಕ್ಷನ್ ಫೆಸಿಲಿಟೇಟರ್- 1438 ಹುದ್ದೆಗಳು
  • ಮ್ಯಾನೇಜರ್- 9 ಹುದ್ದೆಗಳು
  • ಕ್ರೆಡಿಟ್ ಅನಾಲಿಸ್ಟ್- 55 ಹುದ್ದೆಗಳು
  • ಸರ್ಕಲ್ ಅಡ್ವೈಸರ್- 1 ಹುದ್ದೆ
  • ಒಟ್ಟು ಹುದ್ದೆಗಳ ಸಂಖ್ಯೆ- 1503

ಅರ್ಹತಾ ಮಾನದಂಡಗಳು:

ಇದನ್ನೂ ಓದಿ
Image
IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ
Image
Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ
Image
Indian Railway Recruitment 2022: ರೈಲ್ವೆ ನೇಮಕಾತಿ: 596 ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ECIL Recruitment 2022: ECIL ನೇಮಕಾತಿ: ಮಾಸಿಕ ವೇತನ 31 ಸಾವಿರ ರೂ.

ಈ ಹುದ್ದೆಗಳಿಗೆ ವಿಭಿನ್ನ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾದ ಸಂಬಂಧಿತ ವಿದ್ಯಾರ್ಹತೆಯನ್ನು ಪರಿಶೀಲಿಸಬಹುದು.

ವಯೋಮಿತಿ:

  • ಕಲೆಕ್ಷನ್ ಫೆಸಿಲಿಟೇಟರ್- 56 ರಿಂದ 63 ವರ್ಷಗಳು
  • ಮ್ಯಾನೇಜರ್- 28 ರಿಂದ 35 ವರ್ಷಗಳು
  • ಕ್ರೆಡಿಟ್ ಅನಾಲಿಸ್ಟ್- 25 ರಿಂದ 35 ವರ್ಷಗಳು
  • ಸರ್ಕಲ್ ಅಡ್ವೈಸರ್- ಗರಿಷ್ಠ ವಯೋಮಿತಿ 62 ವರ್ಷಗಳು

ಇದನ್ನೂ ಓದಿ: ISRO Recruitment 2022: ಇಸ್ರೋ ನೇಮಕಾತಿ: ಪದವೀಧರರು ಅರ್ಜಿ ಸಲ್ಲಿಸಿ

ಆಯ್ಕೆ ಪ್ರಕ್ರಿಯೆ:

ಈ ನೇಮಕಾತಿ ಪ್ರಕ್ರಿಯೆಯ ಅಡಿಯಲ್ಲಿ, ಎಲ್ಲಾ ಅರ್ಜಿ ನಮೂನೆಗಳನ್ನು ಶಾರ್ಟ್‌ಲಿಸ್ಟ್ ಮಾಡಿದ ನಂತರ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:

  • ಸಾಮಾನ್ಯ/EWS/OBC ಅಭ್ಯರ್ಥಿಗಳಿಗೆ- 750 ರೂ.
  • SC/ ST/ PWD ಅಭ್ಯರ್ಥಿಗಳಿಗೆ- ಯಾವುದೇ ಶುಲ್ಕವಿಲ್ಲ.

ಪ್ರಮುಖ ದಿನಾಂಕ:

ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 10, 2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 10, 2023

Published On - 2:36 pm, Thu, 29 December 22

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ