SBI Recruitment 2022: ಎಸ್ಬಿಐ ನೇಮಕಾತಿ: 55 ಹುದ್ದೆಗಳಿಗೆ ಅರ್ಜಿ ಆಹ್ವಾನ
SBI Recruitment 2022: ಈ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆಯು ಶಾರ್ಟ್‌ಲಿಸ್ಟ್ ಮತ್ತು ಸಂದರ್ಶನವನ್ನು ಆಧರಿಸಿರುತ್ತದೆ. ಬ್ಯಾಂಕಿನಿಂದ ರಚಿಸಲಾದ ಶಾರ್ಟ್‌ಲಿಸ್ಟಿಂಗ್ ಸಮಿತಿಯು ಶಾರ್ಟ್‌ಲಿಸ್ಟಿಂಗ್ ನಿಯತಾಂಕಗಳನ್ನು ನಿರ್ಧರಿಸುತ್ತದೆ.
SBI Recruitment 2022: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮ್ಯಾನೇಜರ್ (ಕ್ರೆಡಿಟ್ ಅನಾಲಿಸ್ಟ್) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 55
ಅರ್ಹತಾ ಮಾನದಂಡಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂಧಿತ ವಿಷಯದಲ್ಲಿ BE/B.Tech ಮಾಡಿರಬೇಕು. ಅಥವಾ ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ ಕನಿಷ್ಠ 60% ಅಂಕಗಳೊಂದಿಗೆ MCA ಅಥವಾ MBA / PGDM ಮಾಡಿರಬೇಕು.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು MMGS-III ರೂ. ಅಡಿಯಲ್ಲಿ ವೇತನ ನಿಗದಿ ಮಾಡಲಾಗುತ್ತದೆ. ಅದರಂತೆ 63840 ರಿಂದ 78230 ರೂ.ವರೆಗೆ ಮಾಸಿಕ ವೇತನ ಸಿಗಲಿದೆ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆಯು ಶಾರ್ಟ್‌ಲಿಸ್ಟ್ ಮತ್ತು ಸಂದರ್ಶನವನ್ನು ಆಧರಿಸಿರುತ್ತದೆ. ಬ್ಯಾಂಕಿನಿಂದ ರಚಿಸಲಾದ ಶಾರ್ಟ್‌ಲಿಸ್ಟಿಂಗ್ ಸಮಿತಿಯು ಶಾರ್ಟ್‌ಲಿಸ್ಟಿಂಗ್ ನಿಯತಾಂಕಗಳನ್ನು ನಿರ್ಧರಿಸುತ್ತದೆ. ಆ ಬಳಿಕ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ.
ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಡಿಸೆಂಬರ್ 12
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.