SBI Recruitment 2022: ಬ್ಯಾಂಕ್ ನೇಮಕಾತಿ: ಪದವೀಧರರಿಗೆ ಇಲ್ಲಿದೆ ಸುರ್ವಣಾವಕಾಶ

| Updated By: ಝಾಹಿರ್ ಯೂಸುಫ್

Updated on: Sep 19, 2022 | 8:00 AM

SBI Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SBI ನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

SBI Recruitment 2022: ಬ್ಯಾಂಕ್ ನೇಮಕಾತಿ: ಪದವೀಧರರಿಗೆ ಇಲ್ಲಿದೆ ಸುರ್ವಣಾವಕಾಶ
Bank Jobs
Follow us on

SBI Clerk Recruitment 2022: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (SBI) ಕ್ಲರ್ಕ್ ಕೇಡರ್‌ನಲ್ಲಿನ ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್​​ ಮತ್ತು ಸೇಲ್ಸ್​) ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SBI ನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 5008

ಅರ್ಹತಾ ಮಾನದಂಡಗಳು:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಅಂದರೆ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ
BECIL Recruitment 2022: ಬಿಇಸಿಐಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
SSC Recruitment 2022: ಎಸ್​​ಎಸ್​ಸಿ ಜೆಇ ಹುದ್ದೆಗಳ ನೇಮಕಾತಿ: ವೇತನ 1 ಲಕ್ಷ ರೂ.
NHAI Recruitment 2022: ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ: ವೇತನ 60 ಸಾವಿರ ರೂ.
BSNL Recruitment 2022: BSNL ಕರ್ನಾಟಕದಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 20 ವರ್ಷದಿಂದ 28 ವರ್ಷದೊಳಗಿರಬೇಕು.

ಅರ್ಜಿ ಶುಲ್ಕ:

  • ಸಾಮಾನ್ಯ / OBC / EWS ಅಭ್ಯರ್ಥಿಗಳಿಗೆ- ರೂ. 750/-
  • SC / ST / PWBD / ESM / DESM – ಯಾವುದೇ ಶುಲ್ಕವಿಲ್ಲ.

ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ. 19900 ರಿ.ಂದ 47920 ರೂ.ವರೆಗೆ ವೇತನ ನಿಗದಿ ಮಾಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

  • ಪೂರ್ವಭಾವಿ ಪರೀಕ್ಷೆಯ
  • ಮುಖ್ಯ ಪರೀಕ್ಷೆಯ
  • ಭಾಷಾ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 27, 2022

ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.