SBI Recruitment 2022: ಡಿಗ್ರಿ ಪಾಸಾದವರಿಗೆ SBI ನಲ್ಲಿದೆ ಉದ್ಯೋಗ: ವೇತನ 47 ಸಾವಿರ ರೂ.

| Updated By: ಝಾಹಿರ್ ಯೂಸುಫ್

Updated on: Sep 07, 2022 | 4:26 PM

SBI Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SBI ನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

SBI Recruitment 2022: ಡಿಗ್ರಿ ಪಾಸಾದವರಿಗೆ SBI ನಲ್ಲಿದೆ ಉದ್ಯೋಗ: ವೇತನ 47 ಸಾವಿರ ರೂ.
SBI Recruitment 2022
Follow us on

SBI Recruitment 2022: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಕ್ಲರ್ಕ್ ಕೇಡರ್‌ನಲ್ಲಿ ಜೂನಿಯರ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SBI ನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 5008

ಅರ್ಹತಾ ಮಾನದಂಡಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.

ಇದನ್ನೂ ಓದಿ
BECIL Recruitment 2022: ಬಿಇಸಿಐಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
SSC Recruitment 2022: ಎಸ್​​ಎಸ್​ಸಿ ಜೆಇ ಹುದ್ದೆಗಳ ನೇಮಕಾತಿ: ವೇತನ 1 ಲಕ್ಷ ರೂ.
NHAI Recruitment 2022: ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ: ವೇತನ 60 ಸಾವಿರ ರೂ.
BSNL Recruitment 2022: BSNL ಕರ್ನಾಟಕದಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ:
ಅಭ್ಯರ್ಥಿಗಳ ವಯಸ್ಸು 20 ವರ್ಷದಿಂದ 28 ವರ್ಷದೊಳಗಿರಬೇಕು. ಹಾಗೆಯೇ ಮೀಸಲಾತಿ ವರ್ಗದವರಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದ್ದು, ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ಅರ್ಜಿ ಶುಲ್ಕ:

  • SC / ST / PWBD / ESM / DESM ಅಭ್ಯರ್ಥಿಗಳಿಗೆ- ಯಾವುದೇ ಶುಲ್ಕವಿಲ್ಲ
  • ಸಾಮಾನ್ಯ / OBC / EWS ಅಭ್ಯರ್ಥಿಗಳಿಗೆ – ರೂ. 750/-

ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 19900 ರಿಂದ 47920 ರೂ. ವರೆಗೂ ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

  • ಪೂರ್ವಭಾವಿ ಪರೀಕ್ಷೆ
  • ಮುಖ್ಯ ಪರೀಕ್ಷೆಯ
  • ಭಾಷಾ ಪರೀಕ್ಷೆ
  • ಪ್ರಮಾಣಪತ್ರಗಳ ಪರಿಶೀಲನೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ:

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – ಸೆಪ್ಟೆಂಬರ್ 7, 2022
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 27, 2022

ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.