SBI Recruitment 2022: SBI ಸ್ಪೆಷಲಿಸ್ಟ್ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಆಯ್ಕೆ
SBI Recruitment 2022; ಅಭ್ಯರ್ಥಿಗಳನ್ನು ಅವರ ಮೊದಲ ವಿದ್ಯಾರ್ಹತೆ ಮತ್ತು ಅನುಭವದ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ನಂತರ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
SBI Recruitment 2022: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಹಲವಾರು ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ 14 ಸ್ಪೆಷಲಿಸ್ಟ್ ಹುದ್ದೆಗಳಿಗೆ ಭರ್ತಿ ನಡೆಯಲಿದ್ದು, CA / CFA / MBA / PGDM / M.Sc ಮಾಡಿದವರು ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.
* ಅಧಿಸೂಚನೆಯ ಪ್ರಕಾರ ಒಟ್ಟು 14 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ CA / CFA / MBA / PGDM / M.Sc ತೇರ್ಗಡೆಯಾಗಿರಬೇಕು. ಹಾಗೆಯೇ ಸಂಬಂಧಿತ ಕೆಲಸದಲ್ಲಿ ಅನುಭವ, ತಾಂತ್ರಿಕ ಜ್ಞಾನ ಹೊಂದಿರಬೇಕು.
* ಅಭ್ಯರ್ಥಿಗಳ ವಯಸ್ಸು 40 ವರ್ಷ ಮೀರಿರಬಾರದು.
ಪ್ರಮುಖ ವಿಷಯಗಳು..
* ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ.
* ಅಭ್ಯರ್ಥಿಗಳನ್ನು ಅವರ ಮೊದಲ ವಿದ್ಯಾರ್ಹತೆ ಮತ್ತು ಅನುಭವದ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ನಂತರ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 100 ಅಂಕಗಳಿಗೆ ನಡೆಸುವ ಸಂದರ್ಶನದಲ್ಲಿ ತೋರಿದ ಪ್ರತಿಭೆಯನ್ನು ಆಧರಿಸಿ ಆಯ್ಕೆ ನಡೆಯಲಿದೆ.
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16-06-2022.
* ಈ ನೇಮಕಾತಿ ಕುರಿತಾದ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
* ಸ್ಟೇಟ್ ಬ್ಯಾಂಕ್ ಇಂಡಿಯಾದ ಅಧಿಕೃತ ವೆಬ್ಸೈಟ್ಗೆ ತೆರಳಲು ಇಲ್ಲಿ ಕ್ಲಿಕ್ ಮಾಡಿ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.