AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI Recruitment 2026: ಎಸ್‌ಬಿಐನಲ್ಲಿ ಬಂಪರ್ ನೇಮಕಾತಿ; 45 ಲಕ್ಷ ರೂ. ವೇತನದ ಹುದ್ದೆಗೆ ಅರ್ಜಿ ಆಹ್ವಾನ!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) 8 ಲೀಡ್ ಬಿಸಿನೆಸ್ ಅನಾಲಿಸ್ಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಬಿಇ/ಬಿಟೆಕ್, ಎಂಸಿಎ, ಎಂಬಿಎ ಪದವೀಧರರಿಗೆ 45 ಲಕ್ಷ ರೂ. ವಾರ್ಷಿಕ ವೇತನದೊಂದಿಗೆ ಇದು ಸುವರ್ಣಾವಕಾಶ. ಲಿಖಿತ ಪರೀಕ್ಷೆ ಇಲ್ಲದೆ, ಸಂದರ್ಶನದ ಮೂಲಕ ಆಯ್ಕೆ ನಡೆಯುತ್ತದೆ. ಸಾಮಾನ್ಯ ಅಭ್ಯರ್ಥಿಗಳಿಗೆ 750 ರೂ. ಶುಲ್ಕವಿದ್ದು, ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕವಿಲ್ಲ. ಮೇ 4 ರೊಳಗೆ ಅರ್ಜಿ ಸಲ್ಲಿಸಿ.

SBI Recruitment 2026: ಎಸ್‌ಬಿಐನಲ್ಲಿ ಬಂಪರ್ ನೇಮಕಾತಿ; 45 ಲಕ್ಷ ರೂ. ವೇತನದ ಹುದ್ದೆಗೆ ಅರ್ಜಿ ಆಹ್ವಾನ!
ಎಸ್‌ಬಿಐನಲ್ಲಿ ಬಂಪರ್ ನೇಮಕಾತಿ
ಅಕ್ಷತಾ ವರ್ಕಾಡಿ
|

Updated on: Apr 26, 2026 | 6:05 PM

Share

ಭಾರತದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI), ದೇಶಾದ್ಯಂತ ಇರುವ ತನ್ನ ವಿವಿಧ ಶಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ‘ಸ್ಪೆಷಲಿಸ್ಟ್ ಕೇಡರ್’ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 8 ಲೀಡ್ ಬಿಸಿನೆಸ್ ಅನಾಲಿಸ್ಟ್ (Lead Business Analyst) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಪ್ರತಿಭಾವಂತ ವೃತ್ತಿಪರರಿಗೆ ಇದು ಸುವರ್ಣಾವಕಾಶವಾಗಿದೆ.

ಶೈಕ್ಷಣಿಕ ಅರ್ಹತೆ ಮತ್ತು ಅನುಭವ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿತ ವಿಭಾಗದಲ್ಲಿ ಬಿಇ/ಬಿಟೆಕ್ (BE/B.Tech) ಅಥವಾ ಎಂಸಿಎ (MCA), ಎಂಟೆಕ್ (M.Tech/M.Sc) ಅಥವಾ ಎಂಬಿಎ (MBA) ಪದವಿ ಪಡೆದಿರಬೇಕು. ಶೈಕ್ಷಣಿಕ ಅರ್ಹತೆಯ ಜೊತೆಗೆ, ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕೆಲಸದ ಅನುಭವವನ್ನು ಹೊಂದಿರುವುದು ಕಡ್ಡಾಯವಾಗಿದೆ. ಮಾರ್ಚ್ 31, 2026ಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಗಳ ವಯಸ್ಸು 30 ರಿಂದ 40 ವರ್ಷಗಳ ನಡುವೆ ಇರಬೇಕು.

ಅರ್ಜಿ ಶುಲ್ಕದ ವಿವರ:

ಅರ್ಜಿ ಸಲ್ಲಿಸುವ ಸಾಮಾನ್ಯ (General), ಒಬಿಸಿ (OBC) ಮತ್ತು ಇಡಬ್ಲ್ಯೂಎಸ್ (EWS) ವರ್ಗದ ಅಭ್ಯರ್ಥಿಗಳು 750 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಆದರೆ, ಎಸ್‌ಸಿ (SC), ಎಸ್‌ಟಿ (ST) ಮತ್ತು ವಿಕಲಚೇತನ (PwBD) ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಆಸಕ್ತರು ಮೇ 4, 2026ರೊಳಗೆ ಎಸ್‌ಬಿಐನ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!

ಆಯ್ಕೆ ಪ್ರಕ್ರಿಯೆ ಮತ್ತು ವೇತನ ಶ್ರೇಣಿ:

ಈ ನೇಮಕಾತಿಯ ವಿಶೇಷತೆಯೆಂದರೆ ಅಭ್ಯರ್ಥಿಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಬದಲಾಗಿ, ಅಭ್ಯರ್ಥಿಗಳ ಅರ್ಜಿಯನ್ನು ಆಧರಿಸಿ ‘ಶಾರ್ಟ್‌ಲಿಸ್ಟ್’ ಮಾಡಲಾಗುತ್ತದೆ. ನಂತರ ಸಂದರ್ಶನ ಮತ್ತು ಮೂಲ ದಾಖಲೆಗಳ ಪರಿಶೀಲನೆಯ ಮೂಲಕ ಅಂತಿಮ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕ ಸುಮಾರು 45 ಲಕ್ಷ ರೂಪಾಯಿಗಳ ಆಕರ್ಷಕ ವೇತನ ಪ್ಯಾಕೇಜ್ ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉನ್ನತ ಹುದ್ದೆ ಮತ್ತು ಉತ್ತಮ ಸಂಬಳದ ನಿರೀಕ್ಷೆಯಲ್ಲಿರುವ ಎಂಜಿನಿಯರಿಂಗ್ ಹಾಗೂ ಮ್ಯಾನೇಜ್‌ಮೆಂಟ್ ಪದವೀಧರರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಎಸ್‌ಬಿಐನ ಅಧಿಕೃತ ಕೆರಿಯರ್ ಪೋರ್ಟಲ್‌ಗೆ ಭೇಟಿ ನೀಡಿ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?