SBI Recruitment 2023: ಎಸ್​ಬಿಐ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

SBI SCO Recruitment 2023: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SBI ನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

SBI Recruitment 2023: ಎಸ್​ಬಿಐ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ
SBI Recruitment 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 27, 2023 | 2:21 PM

SBI SCO Recruitment 2023: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರೋಗ್ರಾಂ ಮ್ಯಾನೇಜರ್ ಸೇರಿದಂತೆ ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 9 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SBI ನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಉಪಾಧ್ಯಕ್ಷ (Transformation)- 1 ಹುದ್ದೆ
  • ಪ್ರೋಗ್ರಾಂ ಮ್ಯಾನೇಜರ್ – 4 ಹುದ್ದೆಗಳು
  • ಮ್ಯಾನೇಜರ್ (Quality & Training)- 1 ಹುದ್ದೆ
  • ಕಮಾಂಡ್ ಸೆಂಟರ್ ಮ್ಯಾನೇಜರ್ – 3 ಹುದ್ದೆಗಳು

ವಿದ್ಯಾರ್ಹತೆ:

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ BCA, B.Sc ಅಥವಾ B.Tech ಪದವಿ ಪಡೆದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಇನ್ನು ತಾಂತ್ರಿಕ ಕ್ಷೇತ್ರದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಕಮಾಂಡ್ ಸೆಂಟರ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಇದಲ್ಲದೇ ಮೂರರಿಂದ ಐದು ವರ್ಷಗಳ ಅನುಭವವನ್ನು ಕೋರಲಾಗಿದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್‌ ಲೀಸ್ಟ್ ಮಾಡಲಾಗುತ್ತದೆ. ಇದರ ಬಳಿಕ ಸಂದರ್ಶನ ಮತ್ತು ಸಿಟಿಸಿ ಸಮಾಲೋಚನೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:

  • ಸಾಮಾನ್ಯ, EWS ಮತ್ತು OBC ಅಭ್ಯರ್ಥಿಗಳಿಗೆ – ರೂ. 750
  • SC, ST, ದಿವ್ಯಾಂಗ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

Also Read: SJVN Limited Recruitment 2023: ಜಲ ವಿದ್ಯುತ್ ನಿಗಮದ ನೇಮಕಾತಿ: ತಿಂಗಳ ಸಂಬಳ 45 ಸಾವಿರ ರೂ.

ವಯೋಮಿತಿ:

  • ಉಪಾಧ್ಯಕ್ಷ ಹುದ್ದೆಗಳಿಗೆ ಗರಿಷ್ಠ ವಯೋಮಿತಿ- 50 ವರ್ಷಗಳು
  • ಪ್ರೋಗ್ರಾಂ ಮ್ಯಾನೇಜರ್‌ ಹುದ್ದೆಗಳಿಗೆ ಗರಿಷ್ಠ ವಯಸ್ಸು- 35 ವರ್ಷಗಳು
  • ಮ್ಯಾನೇಜರ್‌ ಮತ್ತು ಕಮಾಂಡ್ ಸೆಂಟರ್ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಠ ವಯೋಮಿತಿ- 40 ವರ್ಷಗಳು

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಫೆಬ್ರವರಿ 9, 2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ SBIನ ಅಧಿಕೃತ ವೆಬ್‌ಸೈಟ್ bank.sbi/careers ಗೆ ಭೇಟಿ ನೀಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.