SCCL Recruitment 2022: ಎಸ್​ಸಿಸಿಎಲ್​ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ

SCCL Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SCCL ನ ಅಧಿಕೃತ ವೆಬ್‌ಸೈಟ್ tssccl.onlineportal.org.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

SCCL Recruitment 2022: ಎಸ್​ಸಿಸಿಎಲ್​ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ
SCCL Recruitment 2022
TV9kannada Web Team

| Edited By: Zahir PY

Jun 29, 2022 | 7:38 PM

SCCL Recruitment 2022: ಸಿಂಗರೇಣಿ ಕಾಲೀಯರೀಸ್ ಕಂಪನಿ ಲಿಮಿಟೆಡ್​ನ (SCCL) ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಕೋರಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SCCL ನ ಅಧಿಕೃತ ವೆಬ್‌ಸೈಟ್ tssccl.onlineportal.org.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 10 ಆಗಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ – 177

ಅರ್ಹತಾ ಮಾನದಂಡಗಳು: ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಕಂಪ್ಯೂಟರ್ ಅಪ್ಲಿಕೇಶನ್ / ಮಾಹಿತಿ ತಂತ್ರಜ್ಞಾನದಲ್ಲಿ 6 ತಿಂಗಳ ಪ್ರಮಾಣಪತ್ರ ಹೊಂದಿರಬೇಕು.

ವಯೋಮಿತಿ: ಈ ಹುದ್ದೆಗಳಿಗೆ 30 ವರ್ಷಗಳೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ- ರೂ. 400 ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ- ರೂ. 100

ವೇತನ: ಗ್ರೇಡ್-II – ರೂ. 29,460/- ಗ್ರೇಡ್-I- ರೂ. 31,852/- ವಿಶೇಷ ದರ್ಜೆ- ರೂ. 34391/-

ಪ್ರಮುಖ ದಿನಾಂಕಗಳು: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜುಲೈ 10, 2022.

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್​ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada