SCCL Recruitment 2022: ಎಸ್​ಸಿಸಿಎಲ್​ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ

| Updated By: ಝಾಹಿರ್ ಯೂಸುಫ್

Updated on: Jun 29, 2022 | 7:38 PM

SCCL Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SCCL ನ ಅಧಿಕೃತ ವೆಬ್‌ಸೈಟ್ tssccl.onlineportal.org.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

SCCL Recruitment 2022: ಎಸ್​ಸಿಸಿಎಲ್​ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ
SCCL Recruitment 2022
Follow us on

SCCL Recruitment 2022: ಸಿಂಗರೇಣಿ ಕಾಲೀಯರೀಸ್ ಕಂಪನಿ ಲಿಮಿಟೆಡ್​ನ (SCCL) ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಕೋರಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SCCL ನ ಅಧಿಕೃತ ವೆಬ್‌ಸೈಟ್ tssccl.onlineportal.org.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 10 ಆಗಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ – 177

ಅರ್ಹತಾ ಮಾನದಂಡಗಳು:
ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಕಂಪ್ಯೂಟರ್ ಅಪ್ಲಿಕೇಶನ್ / ಮಾಹಿತಿ ತಂತ್ರಜ್ಞಾನದಲ್ಲಿ 6 ತಿಂಗಳ ಪ್ರಮಾಣಪತ್ರ ಹೊಂದಿರಬೇಕು.

ಇದನ್ನೂ ಓದಿ
ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.
Agniveer Recruitment 2022: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿಯ ಅಧಿಸೂಚನೆ ಪ್ರಕಟ
SCI Recruitment 2022: ಸುಪ್ರೀ ಕೋರ್ಟ್ ನೇಮಕಾತಿ: ಪದವಿ ಹೊಂದಿರುವವರಿಗೆ ಅವಕಾಶ, ವೇತನ 63 ಸಾವಿರ ರೂ.
Indian Navy recruitment 2022: ನೌಕಾಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ

ವಯೋಮಿತಿ:
ಈ ಹುದ್ದೆಗಳಿಗೆ 30 ವರ್ಷಗಳೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ- ರೂ. 400
ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ- ರೂ. 100

ವೇತನ:
ಗ್ರೇಡ್-II – ರೂ. 29,460/-
ಗ್ರೇಡ್-I- ರೂ. 31,852/-
ವಿಶೇಷ ದರ್ಜೆ- ರೂ. 34391/-

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜುಲೈ 10, 2022.

ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್​ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ