SCDCC ಬ್ಯಾಂಕ್ ನೇಮಕಾತಿ: 125 ಹುದ್ದೆಗಳಿಗೆ ಅರ್ಜಿ ಆಹ್ವಾನ
SCDCC Bank Recruitment 2023: ಸೌತ್ ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
SCDCC Bank Recruitment 2023: ಸೌತ್ ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ನ ಖಾಲಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಸೆಕೆಂಡ್ ಡಿವಿಷನ್ ಕ್ಲರ್ಕ್, ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 20 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
- ಬ್ಯಾಂಕ್ ಹೆಸರು : ಸೌತ್ ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ (SCDCC)
- ಹುದ್ದೆಗಳ ಸಂಖ್ಯೆ: 125
- ಉದ್ಯೋಗ ಸ್ಥಳ: ಮಂಗಳೂರು – ಕರ್ನಾಟಕ
- ಹುದ್ದೆಯ ಹೆಸರು: ಸೆಕೆಂಡ್ ಡಿವಿಷನ್ ಕ್ಲರ್ಕ್, ಕಂಪ್ಯೂಟರ್ ಪ್ರೋಗ್ರಾಮರ್
ಹುದ್ದೆಗಳ ವಿಭಾಗವಾರು ಮಾಹಿತಿ:
- ಕಂಪ್ಯೂಟರ್ ಪ್ರೋಗ್ರಾಮರ್- 2 ಹುದ್ದೆಗಳು
- ಸೆಕೆಂಡ್ ಡಿವಿಷನ್ ಕ್ಲರ್ಕ್- 123 ಹುದ್ದೆಗಳು
ಶೈಕ್ಷಣಿಕ ಅರ್ಹತೆ:
- ಕಂಪ್ಯೂಟರ್ ಪ್ರೋಗ್ರಾಮರ್- BE, M.Sc in Computer Science, MCA ಮಾಡಿರಬೇಕು.
- ಸೆಕೆಂಡ್ ಡಿವಿಷನ್ ಕ್ಲರ್ಕ್- ಪದವಿ , ಡಿಪ್ಲೊಮಾ, ಸ್ನಾತಕೋತ್ತರ ಪದವಿ ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಸೌತ್ ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ ಸಡಿಲಿಕೆ:
- ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
- SC/ST ಅಭ್ಯರ್ಥಿಗಳು: 05 ವರ್ಷಗಳು
ಅರ್ಜಿ ಶುಲ್ಕ:
- SC/ST ಅಭ್ಯರ್ಥಿಗಳಿಗೆ: ರೂ.590/-
- ಎಲ್ಲಾ ಇತರ ಅಭ್ಯರ್ಥಿಗಳಿಗೆ: ರೂ.1180/-
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಮಾಸಿಕ ವೇತನ:
- ಕಂಪ್ಯೂಟರ್ ಪ್ರೋಗ್ರಾಮರ್- ರೂ.36985 ರಿಂದ ರೂ. 89600/-
- ಸೆಕೆಂಡ್ ಡಿವಿಷನ್ ಕ್ಲರ್ಕ್- ರೂ.24910 ರಿಂದ ರೂ. 55655/-
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-ಸೆಪ್ಟೆಂಬರ್-2023
ಅರ್ಜಿ ಸಲ್ಲಿಸುವುದು ಹೇಗೆ?
ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಈ ಹುದ್ದೆಗಳಿಗೆ ನೇರವಾಗಿ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಕರಾವಳಿ ಭದ್ರತಾ ಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಅಧಿಕೃತ ವೆಬ್‌ಸೈಟ್: scdccbank.com