SCIL Recruitment 2022: ಉದ್ಯೋಗ ಹುಡುಕುತ್ತಿದ್ದೀರಾ? ಹಾಗಿದ್ರೆ ಶಿಪ್ಪಿಂಗ್ ಕಾರ್ಪೊರೇಶನ್​ನಲ್ಲಿದೆ ಉದ್ಯೋಗಾವಕಾಶ

| Updated By: ಝಾಹಿರ್ ಯೂಸುಫ್

Updated on: Jul 28, 2022 | 3:57 PM

SCIL Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SCIL ನ ಅಧಿಕೃತ ವೆಬ್‌ಸೈಟ್ shipindia.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

SCIL Recruitment 2022: ಉದ್ಯೋಗ ಹುಡುಕುತ್ತಿದ್ದೀರಾ? ಹಾಗಿದ್ರೆ ಶಿಪ್ಪಿಂಗ್ ಕಾರ್ಪೊರೇಶನ್​ನಲ್ಲಿದೆ ಉದ್ಯೋಗಾವಕಾಶ
SCIL Recruitment 2022
Follow us on

SCIL Recruitment 2022: ಶಿಪ್ಪಿಂಗ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ (SCIL) ನ ಸಹಾಯಕ ವ್ಯವಸ್ಥಾಪಕರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SCIL ನ ಅಧಿಕೃತ ವೆಬ್‌ಸೈಟ್ shipindia.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

  • ಮ್ಯಾನೇಜ್ಮೆಂಟ್: 17 ಹುದ್ದೆಗಳು
  • ಹಣಕಾಸು: 10 ಹುದ್ದೆಗಳು
  • HR: 10 ಹುದ್ದೆಗಳು
  • ಕಾನೂನು: 5 ಹುದ್ದೆಗಳು
  • ಫೈರ್ & ಸೆಕ್ಯುರಿಟಿ: 2 ಹುದ್ದೆಗಳು
  • ಸಿವಿಲ್ ಎಂಜಿನಿಯರಿಂಗ್: 1 ಹುದ್ದೆ
  • CS: 1 ಹುದ್ದೆ

ಅರ್ಹತಾ ಮಾನದಂಡಗಳು:
ಆಯಾ ಹುದ್ದೆಗಳಿಗೆ ವಿಭಿನ್ನ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿದ್ದು, ಹೀಗಾಗಿ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಸಂಬಂಧಿತ ವಿದ್ಯಾರ್ಹತೆಯನ್ನು ಪರಿಶೀಲಿಸಬಹುದು.

ಇದನ್ನೂ ಓದಿ
Anganwadi Recruitment 2022: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
HAL Recruitment 2022: ಹೆಚ್​ಎಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Coal India MT Recruitment 2022: ಕೋಲ್ ಇಂಡಿಯಾದ 481 ಹುದ್ದೆಗಳಿಗೆ ಅರ್ಜಿ ಆಹ್ವಾನ
BBMP Recruitment 2022: ‘ನಮ್ಮ ಕ್ಲಿನಿಕ್’​ನಲ್ಲಿರುವ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆ:
ಆಯ್ಕೆ ಪ್ರಕ್ರಿಯೆಯು ಆನ್‌ಲೈನ್ ಪರೀಕ್ಷೆ ಮತ್ತು ಅಂತಿಮ ಆಯ್ಕೆ ಪ್ರಕ್ರಿಯೆಯನ್ನು ಒಳಗೊಂಡಿರುತ್ತದೆ. ಆನ್‌ಲೈನ್ ಪರೀಕ್ಷೆಯನ್ನು ಈ ಕೆಳಗಿನ ಕೇಂದ್ರಗಳಲ್ಲಿ ನಡೆಸಲಾಗುತ್ತದೆ – ಮುಂಬೈ (ಥಾಣೆ ಮತ್ತು ನವಿ ಮುಂಬೈ ಸೇರಿದಂತೆ), ಚೆನ್ನೈ, ಕೋಲ್ಕತ್ತಾ, ಬೆಂಗಳೂರು, ಗುವಾಹಟಿ ಮತ್ತು ದೆಹಲಿ ಮತ್ತು NCR.

ಅರ್ಜಿ ಶುಲ್ಕ:
ಸಾಮಾನ್ಯ, OBC ಮತ್ತು EWS ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ – ರೂ. 500/-
SC/ST/PWD/XSM ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ – ರೂ. 100/-

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 16 ಆಗಸ್ಟ್, 2022

ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.