
ಅರೆವಾಹಕ ಪ್ರಯೋಗಾಲಯದಲ್ಲಿ (SCL) ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಫೆಬ್ರವರಿ 26 ರ ಒಳಗೆ ಅರ್ಜಿ ಸಲ್ಲಿಸಬಹುದು. ಅಪ್ಲಿಕೇಶನ್ ಪ್ರಕ್ರಿಯೆಯು ಜನವರಿ 27ರಿಂದ ಪ್ರಾರಂಭವಾಗಿದೆ. ನಿಗದಿತ ಕೊನೆಯ ದಿನಾಂಕದಂದು ಅಥವಾ ಮೊದಲು ಅಧಿಕೃತ ವೆಬ್‌ಸೈಟ್ scl.gov.in ಗೆ ಭೇಟಿ ನೀಡುವ ಮೂಲಕ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಬಹುದು.
ಸಹಾಯಕರ ಒಟ್ಟು 25 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಸಾಮಾನ್ಯ ವರ್ಗದ 11 ಹುದ್ದೆಗಳು, ಒಬಿಸಿಯ 2 ಹುದ್ದೆಗಳು, ಇಡಬ್ಲ್ಯೂಎಸ್‌ನ 2 ಹುದ್ದೆಗಳು, 6 ಹುದ್ದೆಗಳನ್ನು ಎಸ್‌ಸಿ ಮತ್ತು ಎಸ್‌ಟಿ ವರ್ಗಗಳಿಗೆ ಮೀಸಲಿಡಲಾಗಿದೆ. ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಿದ್ಯಾರ್ಹತೆ ಏನು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.
ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಶಿಕ್ಷಣ/ಸಂಶೋಧನಾ ಸಂಸ್ಥೆ/ಸರ್ಕಾರಿ ಕಛೇರಿಯಲ್ಲಿ ಕೆಲಸ ಮಾಡಿದ ಅನುಭವವೂ ಇರಬೇಕು.
ಸಾಮಾನ್ಯ, OBC ಮತ್ತು EWS ವರ್ಗದ ಅಭ್ಯರ್ಥಿಗಳು 944 ರೂಪಾಯಿಗಳ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಆದರೆ SC, SC ಮತ್ತು ಅಂಗವಿಕಲ ವರ್ಗದ ಅಭ್ಯರ್ಥಿಗಳು 472 ರೂಪಾಯಿಗಳ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಆನ್‌ಲೈನ್ ಮೋಡ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬಹುದು.
ಇದನ್ನೂ ಓದಿ: ಸರ್ಕಾರಿ ಉದ್ಯೋಗ ಪಡೆಯಲು ಸುವರ್ಣಾವಕಾಶ; ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ನಲ್ಲಿ ಅನೇಕ ಹುದ್ದೆಗಳಿಗೆ ನೇಮಕಾತಿ
ಲಿಖಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ ಇತ್ಯಾದಿ ಪ್ರಕ್ರಿಯೆಗಳ ಮೂಲಕ ಅರ್ಜಿದಾರರನ್ನು ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಸಾಮಾನ್ಯ ಜ್ಞಾನ, ತಾರ್ಕಿಕತೆ ಮತ್ತು ಕಂಪ್ಯೂಟರ್‌ಗೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಲಾಗುತ್ತದೆ.
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ