SEBI Recruitment 2022: ಆರಂಭಿಕ ವೇತನ 28 ಸಾವಿರ: 120 ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

SEBI Grade A Recruitment 2022: ಈ ಹುದ್ದೆಗಳಿಗೆ ಗರಿಷ್ಠ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಡಿಸೆಂಬರ್ 31,2021ರ ಅನ್ವಯ ಗರಿಷ್ಠ ವಯೋಮಿತಿಯನ್ನು ನಿರ್ಧರಿಸಲಾಗುತ್ತದೆ.

SEBI Recruitment 2022: ಆರಂಭಿಕ ವೇತನ 28 ಸಾವಿರ: 120 ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ
SEBI Grade A Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 05, 2022 | 8:43 PM

ಸೆಕ್ಯುರಿಟೀಸ್ & ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾದಲ್ಲಿ 120 ಸಹಾಯಕ ವ್ಯವಸ್ಥಾಪಕ (ಗ್ರೇಡ್ ಎ) ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ sebi.gov.in ಮೂಲಕ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಸ್ನಾತಕೋತ್ತರ ಪದವಿ, ಪದವಿ ಮತ್ತು ಕಾನೂನು ಪದವಿಯನ್ನು ಪಡೆದಿರಬೇಕು.

ವಯೋಮಿತಿ: ಈ ಹುದ್ದೆಗಳಿಗೆ ಗರಿಷ್ಠ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಡಿಸೆಂಬರ್ 31,2021ರ ಅನ್ವಯ ಗರಿಷ್ಠ ವಯೋಮಿತಿಯನ್ನು ನಿರ್ಧರಿಸಲಾಗುತ್ತದೆ. ಹಾಗೆಯೇ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅದೇ ರೀತಿ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 28,150 ರಿಂದ 1,15,000 ರೂ.ವರೆಗೆ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 1000 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಹಾಗೆಯೇ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಕೆ ಆರಂಭ: ಜನವರಿ 5, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 24, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ sebi.gov.in ಮೂಲಕ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಹಾಗೂ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  Virat Kohli: ವಿರಾಟ್ ಕೊಹ್ಲಿಯ ಗಾಯ, ರಾಹುಲ್ ದ್ರಾವಿಡ್ ಹೇಳಿಕೆ ಮತ್ತು 100ನೇ ಟೆಸ್ಟ್​..!

ಇದನ್ನೂ ಓದಿ:  Ravindra Jadeja: ಸ್ಟಾರ್ ಆಲ್​ರೌಂಡರ್ ಜಡೇಜಾರನ್ನು ಆಯ್ಕೆ ಮಾಡದಿರಲು ಇದುವೇ ಕಾರಣ..!

ಇದನ್ನೂ ಓದಿ: Rohit Sharma: ಫಿಟ್​ನೆಸ್​ ಅಥವಾ ಇನ್ನೇನಾದರೂ? ರೋಹಿತ್ ಶರ್ಮಾ ಕೈ ಬಿಡಲು ಕಾರಣವೇನು?

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

(SEBI Grade A Recruitment 2022: Apply online for 120 vacancies)

ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್