SECL Recruitment 2022: ಕೋಲ್ ಇಂಡಿಯಾ, ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ ಲಿಮಿಟೆಡ್ ಅಡಿಯಲ್ಲಿ SECL ಕಂಪನಿಯಲ್ಲಿ ಉದ್ಯೋಗ ಪಡೆಯಲು ಅಭ್ಯರ್ಥಿಗಳಿಗೆ ಇಲ್ಲಿದೆ ಸುವರ್ಣಾವಕಾಶ. ವಿಶೇಷವೆಂದರೆ ನೇಮಕಾತಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಅಂದರೆ ಅಭ್ಯರ್ಥಿಯು ಪದವಿಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ನೇಮಕಾತಿ ನಡೆಯಲಿದೆ. ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶ ಎಂದರೆ ಮೊದಲು ಅರ್ಜಿ ಸಲ್ಲಿಸಿದ ಅಭ್ಯರ್ಥಿಗೆ ಮೆರಿಟ್ ಪಟ್ಟಿಯಲ್ಲಿ ಆದ್ಯತೆ ನೀಡಲಾಗುತ್ತದೆ. ಹೀಗಾಗಿ ಶೀಘ್ರದಲ್ಲೇ ಅರ್ಜಿ ಸಲ್ಲಿಸುವುದು ಉತ್ತಮ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 1532
ಇದರಲ್ಲಿ 1150 ಹುದ್ದೆಗಳು ಮೈನಿಂಗ್ ಎಂಜಿನಿಯರಿಂಗ್‌ನಲ್ಲಿ ಟೆಕ್ನಿಷಿಯನ್ ಅಪ್ರೆಂಟಿಸ್‌ಗಾಗಿವೆ. ಎಲೆಕ್ಟ್ರಿಕಲ್, ಸಿವಿಲ್, ಮೆಕ್ಯಾನಿಕಲ್ ಮತ್ತು ಮೈನಿಂಗ್ ಎಂಜಿನಿಯರಿಂಗ್‌ನಲ್ಲಿ ಗ್ರಾಜುಯೇಟ್ ಅಪ್ರೆಂಟಿಸ್‌ಗಾಗಿ 382 ಹುದ್ದೆಗಳಿವೆ.
ವಿದ್ಯಾರ್ಹತೆ:
ಇಂಜಿನಿಯರಿಂಗ್ ಅಭ್ಯರ್ಥಿಗಳು ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಮತ್ತು ಟೆಕ್ನಿಷಿಯನ್ ಇಂಜಿನಿಯರಿಂಗ್‌ಗಾಗಿ, ಮೈನಿಂಗ್ ಇಂಜಿನಿಯರಿಂಗ್ ಅಥವಾ ಗಣಿ ಸಮೀಕ್ಷೆಯಲ್ಲಿ 3 ವರ್ಷಗಳ ಡಿಪ್ಲೊಮಾ ಪದವಿಯನ್ನು ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: SSC GD Constable Vacancy 2022: 45,284 ಉದ್ಯೋಗಾವಕಾಶ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಡಿಸೆಂಬರ್ 19, 2022
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.