
ಆಗ್ನೇಯ ಮಧ್ಯ ರೈಲ್ವೆ (SECR) ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ಅಪ್ರೆಂಟಿಸ್‌ಗಳ ನೇಮಕಾತಿಯನ್ನು ಪ್ರಕಟಿಸಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು Apprentice India ಅಧಿಕೃತ ವೆಬ್‌ಸೈಟ್ apprenticeshipindia.gov.in ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಏಪ್ರಿಲ್ 5 ರಂದು ಪ್ರಾರಂಭವಾಗಿದ್ದು ಮೇ 4 ರವರೆಗೆ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಅಭಿಯಾನದ ಅಡಿಯಲ್ಲಿ, ರೈಲ್ವೆಯಲ್ಲಿ ಒಟ್ಟು 1007 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.
ಶೈಕ್ಷಣಿಕ ಅರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಕನಿಷ್ಠ ಶೇಕಡಾ 50 ಅಂಕಗಳೊಂದಿಗೆ ಮೆಟ್ರಿಕ್ಯುಲೇಷನ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಇದಲ್ಲದೆ, ಅಭ್ಯರ್ಥಿಗಳು ಸಂಬಂಧಿತ ವಿಭಾಗದಲ್ಲಿ ಐಟಿಐ ಪ್ರಮಾಣಪತ್ರವನ್ನು ಹೊಂದಿರಬೇಕು.
ವಯಸ್ಸಿನ ಮಿತಿ:
ಅಭ್ಯರ್ಥಿಗಳ ವಯಸ್ಸಿನ ಮಿತಿ 15 ರಿಂದ 24 ವರ್ಷಗಳ ನಡುವೆ ಇರಬೇಕು. ಆದಾಗ್ಯೂ, ಸರ್ಕಾರಿ ನಿಯಮಗಳ ಪ್ರಕಾರ, ಮೀಸಲಾತಿ ವರ್ಗದ (ಒಬಿಸಿ, ಎಸ್‌ಸಿ, ಎಸ್‌ಟಿ, ದಿವ್ಯಾಂಗ, ಮಾಜಿ ಸೈನಿಕರು) ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುವುದು.
ಇದನ್ನೂ ಓದಿ: ಕೃಷಿ ಎಂಜಿನಿಯರಿಂಗ್‌ನಲ್ಲಿ ಹಲವು ಉದ್ಯೋಗವಕಾಶ; ತಿಂಗಳಿಗೆ ಲಕ್ಷ ಲಕ್ಷ ಸಂಬಳ!
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಆಯ್ಕೆಯು ಮೆರಿಟ್ ಪಟ್ಟಿಯನ್ನು ಆಧರಿಸಿರುತ್ತದೆ. ಅಪ್ರೆಂಟಿಸ್‌ಶಿಪ್ ಮಾಡಬೇಕಾದ ಟ್ರೇಡ್‌ನಲ್ಲಿ ಮೆಟ್ರಿಕ್ಯುಲೇಷನ್ ಮತ್ತು ಐಟಿಐ ಅಂಕಗಳ ಶೇಕಡಾವಾರು ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಇದಲ್ಲದೆ, ಅಭ್ಯರ್ಥಿಗಳ ದಾಖಲೆ ಪರಿಶೀಲನೆಯೂ ನಡೆಯಲಿದ್ದು, ಇದರಲ್ಲಿ ವೈದ್ಯಕೀಯ ಫಿಟ್‌ನೆಸ್ ಪ್ರಮಾಣಪತ್ರವನ್ನು ಸಹ ಕೇಳಲಾಗಿದೆ.
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ