SCI Recruitment 2022: ಶಿಪ್ಪಿಂಗ್ ಕಾರ್ಪೊರೇಷನ್​ನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

| Updated By: ಝಾಹಿರ್ ಯೂಸುಫ್

Updated on: Jul 17, 2022 | 6:48 PM

Shipping Corporation (SCI) Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SCI ಯ ಅಧಿಕೃತ ವೆಬ್​ಸೈಟ್ shipindia.com ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು .

SCI Recruitment 2022: ಶಿಪ್ಪಿಂಗ್ ಕಾರ್ಪೊರೇಷನ್​ನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
SCI Recruitment 2022
Follow us on

SCI Recruitment 2022: ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ( SCI ) ಸಹಾಯಕ ವ್ಯವಸ್ಥಾಪಕರ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SCI ಯ ಅಧಿಕೃತ ವೆಬ್​ಸೈಟ್ shipindia.com ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು . ಈ ನೇಮಕಾತಿಯ ಶಿಕ್ಷಣ ಅರ್ಹತೆಯ, ವಯೋಮಿತಿ, ಆಯ್ಕೆ ಪ್ರಕ್ರಿಯೆ ಮತ್ತು ಇತರ ವಿವರಗಳನ್ನು ಈ ಕೆಳಗಿನಂತಿವೆ.

ಹುದ್ದೆಯ ವಿವರಗಳು:

  • ಮ್ಯಾನೇಜ್ಮೆಂಟ್: 17 ಹುದ್ದೆಗಳು
  • ಫೈನಾನ್ಸ್​: 10 ಹುದ್ದೆಗಳು
  • ಹೆಚ್​ಆರ್​: 10 ಹುದ್ದೆಗಳು
  • ಕಾನೂನು: 5 ಹುದ್ದೆಗಳು
  • ಸಿವಿಲ್: 1 ಹುದ್ದೆ
  • ಅಗ್ನಿಶಾಮಕ ಮತ್ತು ಭದ್ರತೆ: 2 ಹುದ್ದೆಗಳು
  • ಕಂಪನಿ ಕಾರ್ಯದರ್ಶಿ: 1 ಹುದ್ದೆ

ಅರ್ಹತಾ ಮಾನದಂಡ:
ಆಯಾ ಹುದ್ದೆಗಳಿಗೆ ವಿಭಿನ್ನ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ಹಂಚಿಕೊಂಡಿರುವ ವಿವರವಾದ ಅಧಿಸೂಚನೆಯ ಮೂಲಕ ಶೈಕ್ಷಣಿಕ ಅರ್ಹತೆಯನ್ನು ಪರಿಶೀಲಿಸಬಹುದು.

ಇದನ್ನೂ ಓದಿ
ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.
Agniveer Recruitment 2022: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿಯ ಅಧಿಸೂಚನೆ ಪ್ರಕಟ
SCI Recruitment 2022: ಸುಪ್ರೀ ಕೋರ್ಟ್ ನೇಮಕಾತಿ: ಪದವಿ ಹೊಂದಿರುವವರಿಗೆ ಅವಕಾಶ, ವೇತನ 63 ಸಾವಿರ ರೂ.
Indian Navy recruitment 2022: ನೌಕಾಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ

ವಯೋಮಿತಿ:
ಈ ಹುದ್ದೆಗಳಿಗೆ 27 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹಾಗೆಯೇ ಒಬಿಸಿಗೆ 3 ವರ್ಷ ಹಾಗೂ ಎಸ್​ಸಿ-ಎಸ್​ಟಿ ವರ್ಗದವರಿಗೆ 5 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ
ಆಯ್ಕೆ ಪ್ರಕ್ರಿಯೆಯು ಎರಡು ಹಂತಗಳನ್ನು ಒಳಗೊಂಡಿರುತ್ತದೆ.

  • ಹಂತ I: ಆನ್‌ಲೈನ್ ಪರೀಕ್ಷೆ
  • ಹಂತ II: ಅಂತಿಮ ಆಯ್ಕೆ ಪ್ರಕ್ರಿಯೆ (GD & PI)

ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಆಗಸ್ಟ್ 16, 2022

ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಅಭ್ಯರ್ಥಿಗಳು shipindia.com ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.