
ಶಿವಮೊಗ್ಗದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆಯು ಅಧಿಕೃತ ಅಧಿಸೂಚನೆಯ ಮೂಲಕ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 15ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.
| ತಾಲ್ಲೂಕು ಹೆಸರು | ಹುದ್ದೆಗಳ ಸಂಖ್ಯೆ (ಅಂಗನವಾಡಿ ಕಾರ್ಯಕರ್ತೆ) | ಹುದ್ದೆಗಳ ಸಂಖ್ಯೆ (ಅಂಗನವಾಡಿ ಸಹಾಯಕಿ) |
| ಸಾಗರ | 3 | 62 |
| ಭದ್ರಾವತಿ | 19 | 59 |
| ಹೊಸ ನಗರ | 6 | 137 |
| ಶಿಕಾರಿಪುರ | 1 | 23 |
| ಶಿವಮೊಗ್ಗ | 16 | 93 |
| ಸೊರಬಾ | 3 | 42 |
| ತೀರ್ಥಹಳ್ಳಿ | 11 | 69 |
ಇದನ್ನೂ ಓದಿ: ಲಿಖಿತ ಪರೀಕ್ಷೆಯಿಲ್ಲದೆ ರೈಲ್ವೆ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣವಕಾಶ; 10th ಪಾಸಾಗಿದ್ರೆ ಸಾಕು
ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ SSLC, PUC ಪೂರ್ಣಗೊಳಿಸಿರಬೇಕು.
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ