SIDBI Recruitment 2022: SIDBIನ ಸಹಾಯಕ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
SIDBI Recruitment 2022: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಯಶಸ್ವಿಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ.
SIDBI Recruitment 2022: ಸ್ಮಾಲ್ ಇಂಡಸ್ಟ್ರೀಸ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ, ಸಹಾಯಕ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಮಾರ್ಚ್ 4, 2022 ರಿಂದ ಪ್ರಾರಂಭವಾಗಿದೆ. ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅಧಿಕೃತ ವೆಬ್‌ಸೈಟ್ sidbi.in ಭೇಟಿ ನೀಡುವ ಮೂಲಕ 24 ಮಾರ್ಚ್ 2022 ರವರೆಗೆ ಅರ್ಜಿ ಸಲ್ಲಿಸಬಹುದು.
SIDBI Recruitment 2022: ಶೈಕ್ಷಣಿಕ ಅರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ LLB ಪದವಿಯನ್ನು ಹೊಂದಿರಬೇಕು. ಸಿವಿಲ್ , ಮೆಕ್ಯಾನಿಕಲ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಉತ್ತೀರ್ಣರಾದ ಅಭ್ಯರ್ಥಿಗಳು ಸಹ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
SIDBI Recruitment 2022: ವಯೋಮಿತಿ: 21 ವರ್ಷದಿಂದ 28 ವರ್ಷಗಳ ನಡುವೆ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳ ವಯಸ್ಸನ್ನು ಮಾರ್ಚ್ 4, 2022 ರಿಂದ ಲೆಕ್ಕಹಾಕಲಾಗುತ್ತದೆ. OBC ವರ್ಗದ ಅಭ್ಯರ್ಥಿಗಳಿಗೆ 3 ವರ್ಷಗಳು ಮತ್ತು SC/ ST ವರ್ಗದ ಅಭ್ಯರ್ಥಿಗಳಿಗೆ 5 ವರ್ಷಗಳು ಗರಿಷ್ಠ ವಯೋಮಿತಿಯ ಸಡಿಲಿಕೆ ನೀಡಲಾಗಿದೆ.
SIDBI Recruitment 2022 ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಯಶಸ್ವಿಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ.
SIDBI Recruitment 2022: ಪ್ರಮುಖ ದಿನಾಂಕಗಳು: ಅರ್ಜಿಯ ಸಲ್ಲಿಸಲು ಕೊನೆಯ ದಿನಾಂಕ – 24 ಮಾರ್ಚ್ 2022 ಲಿಖಿತ ಪರೀಕ್ಷೆಯ ದಿನಾಂಕ – 16 ಏಪ್ರಿಲ್ 2022
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ: Ipl 2022 Rcb Schedule: RCB ತಂಡ ಸಂಪೂರ್ಣ ವೇಳಾಪಟ್ಟಿ ಹೀಗಿದೆ
ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!
ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?
(SIDBI recruitment 2022: Applications invited for Assistant Manager Grade A posts)