SIDBI Bank Recruitment 2024: ಪದವಿ ಪಾಸಾಗಿದ್ದವರಿಗೆ ಎಸ್ಐಡಿಬಿಐ ಬ್ಯಾಂಕ್ ನಲ್ಲಿ ಉದ್ಯೋಗವಕಾಶ, ಇಂದೇ ಅರ್ಜಿ ಸಲ್ಲಿಸಿ

ಸ್ಮಾಲ್ ಇಂಡಸ್ಟ್ರೀಸ್ ಡೆವಲಪ್ ಮೆಂಟ್ ಬ್ಯಾಂಕ್ ಆಫ್ ಇಂಡಿಯಾವು ಆಫೀಸರ್ (ಗ್ರೂಪ್ ಎ, ಬಿ) ಹುದ್ದೆಗಳ ನೇಮಕಾತಿ 2024 ಗಾಗಿ ಅರ್ಜಿಗಳನ್ನು ಸ್ವೀಕರಿಸಲು ಪ್ರಾರಂಭಿಸಿದೆ. ಒಟ್ಟು 72 ಹುದ್ದೆಗಳು ಖಾಲಿಯಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಎಸ್ ಐಡಿಬಿಐ ನ ಅಧಿಕೃತ ವೆಬ್‌ಸೈಟ್ sidbi.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಹಾಗಾದ್ರೆ ಈ ಬ್ಯಾಂಕ್ ನಲ್ಲಿ ಖಾಲಿಯಿರುವ ಹುದ್ದೆಗಳ ವಿವರ, ಅರ್ಹತೆ, ವಯೋಮಿತಿ, ವೇತನ ಹಾಗೂ ಆಯ್ಕೆ ಪ್ರಕ್ರಿಯೆ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.

SIDBI Bank Recruitment 2024: ಪದವಿ ಪಾಸಾಗಿದ್ದವರಿಗೆ  ಎಸ್ಐಡಿಬಿಐ ಬ್ಯಾಂಕ್ ನಲ್ಲಿ ಉದ್ಯೋಗವಕಾಶ, ಇಂದೇ ಅರ್ಜಿ ಸಲ್ಲಿಸಿ
SIDBI Recruitment 2024
Follow us
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ

Updated on: Nov 09, 2024 | 3:29 PM

ವಿವಿಧ ಪದವಿ, ಸ್ನಾತಕೋತ್ತರ ಪದವಿ ಪಾಸ್ ಆಗಿದ್ದು, ಬ್ಯಾಂಕ್ ನಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವವರಿಗೆ ಇಲ್ಲೊಂದು ಸುವರ್ಣವಕಾಶವಿದೆ. ಸ್ಮಾಲ್ ಇಂಡಸ್ಟ್ರೀಸ್ ಡೆವಲಪ್ ಮೆಂಟ್ ಬ್ಯಾಂಕ್ ಆಫ್ ಇಂಡಿಯಾವು ಆಫೀಸರ್ (ಗ್ರೂಪ್ ಎ, ಬಿ) ಹುದ್ದೆಗಳ ಭರ್ತಿಗೆ ನೇಮಕಾ ತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಒಟ್ಟಾರೆ 72 ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಡಿಸೆಂಬರ್ 2 ರೊಳಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ:

  • ನೇಮಕಾತಿ ಬ್ಯಾಂಕ್ ಹುದ್ದೆ ಹೆಸರು : ಸ್ಮಾಲ್ ಇಂಡಸ್ಟ್ರೀಸ್ ಡೆವಲಪ್ಟೆಂಟ್ ಬ್ಯಾಂಕ್ ಆಫ್ ಇಂಡಿಯಾ
  • ಹುದ್ದೆ ಹೆಸರು : ಆಫೀಸರ್ (ಗ್ರೂಪ್ ಎ, ಬಿ)
  • ಒಟ್ಟು ಹುದ್ದೆಗಳ ಸಂಖ್ಯೆ : 72
  • ಮಾಸಿಕ ವೇತನ : ರೂ 100000 – ರೂ 115000

ಅಭ್ಯರ್ಥಿಗಳಿಗೆ ಇರಬೇಕಾದ ವಿದ್ಯಾರ್ಹತೆ:

  • ರಾಜ್ಯ ಸರ್ಕಾರ, ಕೇಂದ್ರ ಸರ್ಕಾರದ ಅಂಗೀಕೃತ ವಿಶ್ವವಿದ್ಯಾಲಯಗಳಿಂದ ಸಿಎ, ಸಿಎಂಎ, ಐಸಿಡಬ್ಲ್ಯೂಎ, ಸಿಎಫ್‌, ಇತರೆ ಪದವಿ, ಎಲ್‌ಎಲ್‌ಬಿ, ಎಂಬಿಎ, ಎಂಸಿಎ, ಪಿಜಿಡಿಎಂ ಹೀಗೆ ವಿವಿಧ ಪದವಿ ಪಾಸಾಗಿರಬೇಕು.

ವಯಸ್ಸಿನ ಅರ್ಹತೆಗಳು:

  • ಆಫೀಸರ್ ಗ್ರೇಡ್ ಎ ಹುದ್ದೆಗೆ ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು.
  • ಆಫೀಸರ್ ಗ್ರೇಡ್ ಬಿ ಹುದ್ದೆಗೆ ಕನಿಷ್ಠ 25 ವರ್ಷ ಹಾಗೂ ಗರಿಷ್ಠ 33 ವರ್ಷ ವಯಸ್ಸು ಮೀರಿರಬಾರದು.

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ
  • ಸಂದರ್ಶನ ಮೂಲಕ ನೇರ ನೇಮಕಾತಿ

ಅರ್ಜಿ ಶುಲ್ಕ ವಿವರ:

  • ಸಾಮಾನ್ಯ ಅರ್ಹತೆ, ಒಬಿಸಿ ಅಭ್ಯರ್ಥಿಗಳಿಗೆ, ವಿಕಲಚೇತನ ಅಭ್ಯರ್ಥಿಗಳಿಗೆ ರೂ 1100 ಹಾಗೂ
  • ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 175 ರೂ ಶುಲ್ಕವನ್ನು ನಿಗದಿ ಪಡಿಸಲಾಗಿದೆ.
  • ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್, ಕ್ಯಾಶ್ ಕಾರ್ಡ್, ಕ್ರೆಡಿಟ್ ಕಾರ್ಡ್, ಮೊಬೈಲ್ ವ್ಯಾಲೆಟ್ ಈ ವಿಧಾನಗಳಲ್ಲಿ ಅರ್ಜಿ ಶುಲ್ಕ ಪಾವತಿ ಮಾಡಬಹುದು.

ಇದನ್ನೂ ಓದಿ: ಕರ್ನಾಟಕ ಲೋಕಾಯುಕ್ತದಲ್ಲಿ 30 ಕ್ಲರ್ಕ್, ಟೈಪಿಸ್ಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಪ್ರಮುಖ ದಿನಾಂಕಗಳು:

  • ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ : 08-11-2024
  • ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 02-12-2024
  • ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನಾಂಕ: 02-12-2024
  • ವಯಸ್ಸಿನ ಅರ್ಹತೆ ಪರಿಗಣಿಸುವ ದಿನಾಂಕ: 08-11-2024
  • ವಿದ್ಯಾರ್ಹತೆ ಪರಿಗಣಿಸುವ ಕೊನೆ ದಿನಾಂಕ: 02-12-2024
  • ಹಂತ -1 ಆನ್‌ಲೈನ್ ಪರೀಕ್ಷಾ ದಿನಾಂಕ : 22-12-2024
  • ಹಂತ -2 ಆನ್‌ಲೈನ್ ಪರೀಕ್ಷಾ ದಿನಾಂಕ : 19-01-2024
  • ಸಂದರ್ಶನ ನಡೆಯುವ ದಿನಾಂಕ : ಫೆಬ್ರವರಿ 2025

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP
ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಅನ್ನಭಾಗ್ಯ ಎಂದು ಸಿದ್ದರಾಮಯ್ಯರಿಂದ ಕನ್ನಭಾಗ್ಯ: ಆರ್ ಅಶೋಕ್ ವ್ಯಂಗ್ಯ
ಅನ್ನಭಾಗ್ಯ ಎಂದು ಸಿದ್ದರಾಮಯ್ಯರಿಂದ ಕನ್ನಭಾಗ್ಯ: ಆರ್ ಅಶೋಕ್ ವ್ಯಂಗ್ಯ
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರೋದು ಒಂದು ಯು-ಟರ್ನ್ ಸರ್ಕಾರ: ಬೊಮ್ಮಾಯಿ
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರೋದು ಒಂದು ಯು-ಟರ್ನ್ ಸರ್ಕಾರ: ಬೊಮ್ಮಾಯಿ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ