ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಉದ್ಯೋಗಾವಕಾಶ: 56 ಸಾವಿರ ರೂ. ವೇತನ

ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಉದ್ಯೋಗಾವಕಾಶ: 56 ಸಾವಿರ ರೂ. ವೇತನ
SIMS Shivamogga Recruitment 2021

SIMS Shivamogga Recruitment 2021: ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಬೇಕು. ಆ ಬಳಿಕ ಅಲ್ಲಿ ಕೇಳಲಾದ ದಾಖಲೆಗಳನ್ನು ಲಗತ್ತಿಸಿ ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.

TV9kannada Web Team

| Edited By: Zahir PY

Dec 30, 2021 | 7:38 PM

ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಈ ಸಂಸ್ಥೆಯಲ್ಲಿ ಒಟ್ಟು ನಾಲ್ಕು ಹುದ್ದೆಗಳು ಖಾಲಿಯಿದ್ದು, ಆಸಕ್ತ ಅಭ್ಯರ್ಥಿಗಳು ಜನವರಿ 15 ರೊಳಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳು ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಒಟ್ಟು ಹುದ್ದೆಗಳು ಮತ್ತು ಹುದ್ದೆಗಳ ಹೆಸರು:

ಸೈಂಟಿಸ್ಟ್-ಬಿ – 1 ಹುದ್ದೆ

ಲ್ಯಾಬ್ ಟೆಕ್ನೀಶಿಯನ್ – 1 ಹುದ್ದೆ

ಡಾಟಾ ಎಂಟ್ರಿ ಆಪರೇಟರ್ – 1 ಹುದ್ದೆ

ಮಲ್ಟಿ ಟಾಸ್ಕಿಂಗ್ ಸ್ಟಾಫ್ – 1 ಹುದ್ದೆ

ವಿದ್ಯಾರ್ಹತೆ: ಸೈಂಟಿಸ್ಟ್-ಬಿ, ಲ್ಯಾಬ್ ಟೆಕ್ನೀಶಿಯನ್, ಡಿಇಒ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವ ವಿದ್ಯಾಲಯದಿಂದ ಎಂಡಿ/ಎಂಎಸ್/ಡಿಎನ್‌ಬಿ/ಎಂಡಿಎಸ್/ಎಂ.ವಿ.ಎಸ್ಸಿ ಮತ್ತು ಎಹೆಚ್, ಬಿ.ಎಸ್ಸಿ, ಪದವಿಯನ್ನು ಪಡೆದಿರಬೇಕು.

ವಯೋಮಿತಿ : ಈ ಹುದ್ದೆಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ : ಸೈಂಟಿಸ್ಟ್-ಬಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,000 ರೂ. ಲ್ಯಾಬ್ ಟೆಕ್ನೀಶಿಯನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000 ರೂ. ಡಿಇಒ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000 ರೂ. ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000 ರೂ. ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 1000 ರೂ. ಅನ್ನು ಡಿ.ಡಿ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://sims.karnataka.gov.in/ ಗೆ ಭೇಟಿ ನೀಡಿ, ಅಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಬೇಕು. ಆ ಬಳಿಕ ಅಲ್ಲಿ ಕೇಳಲಾದ ದಾಖಲೆಗಳನ್ನು ಲಗತ್ತಿಸಿ ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ: ನಿರ್ದೇಶಕರು ಮತ್ತು ಡೀನ್ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸಾಗರ ರಸ್ತೆ, ಶಿವಮೊಗ್ಗ-577201

ಇದನ್ನೂ ಓದಿ:  India vs South Africa 1st Test: ದಕ್ಷಿಣ ಆಫ್ರಿಕಾ ವಿರುದ್ದ ಭಾರತಕ್ಕೆ ಭರ್ಜರಿ ಜಯ

ಇದನ್ನೂ ಓದಿ:  ಭಾರತವನ್ನು ಗೇಲಿ ಮಾಡಿದ ಇಂಗ್ಲೆಂಡ್ ಕ್ರಿಕೆಟಿಗನ ಕಾಲೆಳೆದ ಆಸ್ಟ್ರೇಲಿಯಾ ಪತ್ರಕರ್ತೆ..!

ಇದನ್ನೂ ಓದಿ: IPL 2022: RCB ಮನೀಷ್ ಪಾಂಡೆಯನ್ನು ಯಾಕೆ ಖರೀದಿಸಬೇಕು ಅಂದರೆ…

ಇದನ್ನೂ ಓದಿ: IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

(SIMS Shivamogga Recruitment 2021)

Follow us on

Related Stories

Most Read Stories

Click on your DTH Provider to Add TV9 Kannada