SJVN Limited Recruitment 2023: ಜಲ ವಿದ್ಯುತ್ ನಿಗಮದ ನೇಮಕಾತಿ: ತಿಂಗಳ ಸಂಬಳ 45 ಸಾವಿರ ರೂ.

| Updated By: ಝಾಹಿರ್ ಯೂಸುಫ್

Updated on: Jan 24, 2023 | 7:15 AM

SJVN Limited Recruitment 2023: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸತ್ಲುಜ್ ಜಲ ವಿದ್ಯುತ್ ನಿಗಮದ ಅಧಿಕೃತ ವೆಬ್​ಸೈಟ್​ sjvn.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

SJVN Limited Recruitment 2023: ಜಲ ವಿದ್ಯುತ್ ನಿಗಮದ ನೇಮಕಾತಿ: ತಿಂಗಳ ಸಂಬಳ 45 ಸಾವಿರ ರೂ.
SJVN Limited Recruitment 2023
Follow us on

SJVN Limited Recruitment 2023: ಸತ್ಲುಜ್ ಜಲ ವಿದ್ಯುತ್ ನಿಗಮ್ ಲಿಮಿಟೆಡ್​ನ (SJVN Limited) ಒಟ್ಟು 105 ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಜೂನಿಯರ್ ಫೀಲ್ಡ್​ ಎಂಜಿನಿಯರ್ ಹಾಗೂ ಜೂನಿಯರ್ ಫೀಲ್ಡ್​ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸತ್ಲುಜ್ ಜಲ ವಿದ್ಯುತ್ ನಿಗಮದ ಅಧಿಕೃತ ವೆಬ್​ಸೈಟ್​ sjvn.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಜೂನಿಯರ್ ಫೀಲ್ಡ್ ಎಂಜಿನಿಯರ್- 85 ಹುದ್ದೆಗಳು
  • ಜೂನಿಯರ್ ಫೀಲ್ಡ್ ಆಫೀಸರ್- 20 ಹುದ್ದೆಗಳು

ಅರ್ಹತಾ ಮಾನದಂಡಗಳು:

ಇದನ್ನೂ ಓದಿ
HAL Recruitment 2023: 10ನೇ ತರಗತಿ ಪಾಸಾದವರಿಗೆ HAL ನಲ್ಲಿದೆ ಉದ್ಯೋಗಾವಕಾಶ
BSNL Recruitment 2023: 11,705 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 40 ಸಾವಿರ ರೂ.
NHAI Recruitment 2023: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ: 56 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ
UPSC Recruitment 2023: ಕೇಂದ್ರ ಗುಪ್ತಚರ ಇಲಾಖೆಯಲ್ಲಿದೆ ಉದ್ಯೋಗಾವಕಾಶ
  • ಜೂನಿಯರ್ ಫೀಲ್ಡ್ ಎಂಜಿನಿಯರ್- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್/ ಎಲೆಕ್ಟ್ರಿಕಲ್ ಅಥವಾ ಮೆಕ್ಯಾನಿಕಲ್ ಎಂಜಿನಿಯರಿಂಗ್​ನಲ್ಲಿ ಪದವಿ ಮಾಡಿರಬೇಕು.
  • ಜೂನಿಯರ್ ಫೀಲ್ಡ್ ಆಫೀಸರ್- ಈ ಹುದ್ದೆಗಳಿ CA (ಇಂಟರ್​)/ ICWA (ಇಂಟರ್​) ಅಥವಾ CMA (ಇಂಟರ್​) ನಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 12, 2023ಕ್ಕೆ ಅನುಗುಣವಾಗಿ 30 ವರ್ಷ ಮೀರಿರಬಾರದು. ಇನ್ನು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, SC/ST ಅಭ್ಯರ್ಥಿಗಳಿಗೆ 5 ವರ್ಷ ಹಾಗೂ PWD (ಜನರಲ್, ಒಬಿಸಿ, SC/ST ) ಅಭ್ಯರ್ಥಿಗಳಿಗೆ 10 ರಿಂದ 15 ವರ್ಷಗಳವರೆಗೆ ವಯೋಮಿಡಿ ಸಡಿಲಿಕೆ ನೀಡಲಾಗಿದೆ.

ಮಾಸಿಕ ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳ ವೇತನವಾಗಿ 45 ಸಾವಿರ ರೂ. ನೀಡಲಾಗುತ್ತದೆ.

ಅರ್ಜಿ ಶುಲ್ಕ:

  • ಸಾಮಾನ್ಯ ಅಭ್ಯರ್ಥಿಗಳಿಗೆ- 300 ರೂ.
  • SC/ST/PWD ಅಭ್ಯರ್ಥಿಗಳಿಗೆ- ಯಾವುದೇ ಅರ್ಜಿ ಶುಲ್ಕ ಇಲ್ಲ.

ಆಯ್ಕೆ ಪ್ರಕ್ರಿಯೆ:

ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಕಂಪ್ಯೂಟರ್​ ಆಧಾರಿತ ಪರೀಕ್ಷೆ ನೀಡಲಾಗುತ್ತದೆ. ಇದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಶಾರ್ಟ್ ಲೀಸ್ಟ್​ ಮಾಡಿ ಸಂದರ್ಶನಕ್ಕೆ ಕರೆಯಲಾಗುತ್ತದೆ.

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಫೆಬ್ರವರಿ 12, 2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.