SIB JO Vacancy: ಸೌತ್ ಇಂಡಿಯಾ ಬ್ಯಾಂಕ್​ನಲ್ಲಿ ಜೂನಿಯರ್ ಆಫೀಸರ್ ಹುದ್ದೆಗೆ ನೇಮಕಾತಿ

ಸೌತ್ ಇಂಡಿಯಾ ಬ್ಯಾಂಕ್ (SIB) ಜೂನಿಯರ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪದವಿ, ಒಂದು ವರ್ಷದ ಅನುಭವ ಹೊಂದಿದವರು ಅಕ್ಟೋಬರ್ 22ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. 28 ವರ್ಷ ವಯೋಮಿತಿ. ಆನ್‌ಲೈನ್ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದಿಂದ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, 4.86-5.06 ಲಕ್ಷ ರೂ. ವಾರ್ಷಿಕ ವೇತನ ಸಿಗಲಿದೆ.

SIB JO Vacancy: ಸೌತ್ ಇಂಡಿಯಾ ಬ್ಯಾಂಕ್​ನಲ್ಲಿ ಜೂನಿಯರ್ ಆಫೀಸರ್ ಹುದ್ದೆಗೆ ನೇಮಕಾತಿ
ಸೌತ್ ಇಂಡಿಯಾ ಬ್ಯಾಂಕ್

Updated on: Oct 22, 2025 | 6:08 PM

ಸಾರ್ವಜನಿಕ ವಲಯದ ಬ್ಯಾಂಕ್ ಸೌತ್ ಇಂಡಿಯಾ ಬ್ಯಾಂಕ್ (SIB) ಜೂನಿಯರ್ ಆಫೀಸರ್ ಹುದ್ದೆಗಳ ಗುತ್ತಿಗೆ ಆಧಾರದ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಯಾವುದೇ ಪದವಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಹರು. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ, ಆಂಧ್ರಪ್ರದೇಶ, ಗೋವಾ, ಗುಜರಾತ್,ಕೇರಳ, ಮಹಾರಾಷ್ಟ್ರ, ತಮಿಳುನಾಡು, ತೆಲಂಗಾಣ ರಾಜ್ಯಗಳಲ್ಲಿ ಕೆಲಸ ಸಿಗಲಿದೆ.

ಜೂನಿಯರ್ ಆಫೀಸರ್ (ಕಾರ್ಯಾಚರಣೆ) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಶೇ. 50 ಅಂಕಗಳೊಂದಿಗೆ ಪದವಿ ಪಡೆದಿರಬೇಕು. ಬ್ಯಾಂಕಿಂಗ್ ಅಥವಾ NBFC ಅಥವಾ ಹಣಕಾಸು ಸಂಸ್ಥೆಗಳಲ್ಲಿ ಕನಿಷ್ಠ ಒಂದು ವರ್ಷದ ಕೆಲಸದ ಅನುಭವ ಹೊಂದಿರಬೇಕು. ಸ್ಥಳೀಯ ಭಾಷೆಯಲ್ಲಿ ಪ್ರವೀಣರಾದವರಿಗೆ ಆದ್ಯತೆ ನೀಡಲಾಗುವುದು. ಅಲ್ಲದೆ, ಅಭ್ಯರ್ಥಿಗಳ ವಯಸ್ಸಿನ ಮಿತಿ ಸೆಪ್ಟೆಂಬರ್ 30 ರಂತೆ 28 ವರ್ಷಗಳನ್ನು ಮೀರಬಾರದು. SC ಮತ್ತು ST ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಐದು ವರ್ಷಗಳವರೆಗೆ ಸಡಿಲಿಕೆ ಇದೆ.

ಇದನ್ನೂ ಓದಿ: ಕರ್ನಾಟಕ ಕಂದಾಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಪಿಯುಸಿ, ಪದವೀಧರರು ಅರ್ಜಿ ಸಲ್ಲಿಸಿ

ಈ ಅರ್ಹತೆಗಳನ್ನು ಹೊಂದಿರುವವರು ಅಕ್ಟೋಬರ್ 22 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಸಾಮಾನ್ಯ ಅಭ್ಯರ್ಥಿಗಳು 500 ರೂ. ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು 200 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು. ಅಂತಿಮ ಆಯ್ಕೆಯು ಆನ್‌ಲೈನ್ ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನವನ್ನು ಆಧರಿಸಿರುತ್ತದೆ. ಆಯ್ಕೆಯಾದವರಿಗೆ ವಾರ್ಷಿಕ 4.86 ರಿಂದ 5.06 ಲಕ್ಷ ರೂ.ಗಳವರೆಗೆ ವೇತನ ನೀಡಲಾಗುತ್ತದೆ. ನವೆಂಬರ್ 1 ಮತ್ತು 2 ರಂದು ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಆನ್‌ಲೈನ್‌ನಲ್ಲಿ ಲಿಖಿತ ಪರೀಕ್ಷೆಗಳನ್ನು ನಡೆಸಲಾಗುತ್ತದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ