Southern Railway Recruitment 2022: ಕ್ರೀಡಾ ಕೋಟಾದಲ್ಲಿ ರೈಲ್ವೆ ಹುದ್ದೆಗಳಿಗೆ ಅರ್ಜಿ ಆಹ್ವಾನ
Southern Railway Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 2, 2023. ಈ ನೇಮಕಾತಿಗೆ ಬೇಕಾದ ಅರ್ಹತಾ ಮಾನದಂಡಗಳು, ವಯೋಮಿತಿ ಸೇರಿದಂತೆ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
Southern Railway Recruitment 2022: ದಕ್ಷಿಣ ರೈಲ್ವೆ ಇಲಾಖೆಯು ಕ್ರೀಡಾ ಕೋಟಾದ ಅಡಿಯಲ್ಲಿ ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಕ್ಷಿಣ ರೈಲ್ವೆಯ ಅಧಿಕೃತ ವೆಬ್ ಸೈಟ್ iroams.com ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 2, 2023. ಈ ನೇಮಕಾತಿಗೆ ಬೇಕಾದ ಅರ್ಹತಾ ಮಾನದಂಡಗಳು, ವಯೋಮಿತಿ ಸೇರಿದಂತೆ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
- VII CPC ಪೇ ಮ್ಯಾಟ್ರಿಕ್ಸ್‌ನ 4/5 ಹಂತ: 5 ಹುದ್ದೆಗಳು
- VII CPC ಪೇ ಮ್ಯಾಟ್ರಿಕ್ಸ್‌ನ 2/3 ಹಂತ: 16 ಹುದ್ದೆಗಳು
- ಒಟ್ಟು ಹುದ್ದೆಗಳ ಸಂಖ್ಯೆ- 21
ಅರ್ಹತಾ ಮಾನದಂಡ:
- VII CPC ಪೇ ಮ್ಯಾಟ್ರಿಕ್ಸ್‌ನ 2/3 ಲೆವೆಲ್‌ನಲ್ಲಿನ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12ನೇ ತರಗತಿ ಪಾಸ್ ಆಗಿರಬೇಕು.
- VII CPC ಮ್ಯಾಟ್ರಿಕ್ಸ್‌ನ 4/5 ಲೆವೆಲ್‌ನಲ್ಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಮಾಡಿರಬೇಕು.
ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯೋಮಿತಿಯು 18 ರಿಂದ 25 ವರ್ಷಗಳ ನಡುವೆ ಇರಬೇಕು.
ಇದನ್ನೂ ಓದಿ: Indian Railway Recruitment 2022: 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ
ಅರ್ಜಿ ಶುಲ್ಕ:
- ಸಾಮಾನ್ಯ ಅಭ್ಯರ್ಥಿಗಳಿಗೆ- ರೂ. 500/-
- ಎಸ್‌ಸಿ/ಎಸ್‌ಟಿ/ಮಹಿಳೆ/ ಮಾಜಿ ಸೈನಿಕರು/ವಿಕಲಚೇತನರು/ಅಲ್ಪಸಂಖ್ಯಾತಅಭ್ಯರ್ಥಿಗಳಿಗೆ- ರೂ. 250/-
ಇದನ್ನೂ ಓದಿ: CRIS Recruitment 2022: ರೈಲ್ವೆ ಇಲಾಖೆಯಲ್ಲಿ ಉದ್ಯೋಗಾವಕಾಶ: ವೇತನ 35 ಸಾವಿರ ರೂ.
ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜನವರಿ 2, 2023
ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.