ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಜನವರಿ 18 ರಂದು ಶಿಫ್ಟ್ 2 ರಲ್ಲಿ ನಡೆಯಬೇಕಿದ್ದ ಎಸ್‌ಎಸ್‌ಸಿ ಸಿಜಿಎಲ್ ಟೈಪಿಂಗ್ ಪರೀಕ್ಷೆಯನ್ನು ಮುಂದೂಡಿದ್ದು, ಈ ಕುರಿತು ಅಧಿಕೃತ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಲಾಗಿದೆ. ಕೆಲವು ತಾಂತ್ರಿಕ ದೋಷಗಳಿಂದ ಈ ಪರೀಕ್ಷೆಯನ್ನು ಮುಂದೂಡಿರುವುದಾಗಿ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ. ಟೈಪಿಂಗ್ ಪರೀಕ್ಷೆಯನ್ನು ಯಾವಾಗ ಮರು ನಡೆಸಲಾಗುವುದು ಎಂದು ತಿಳಿಸಲಾಗಿದೆ.
ಸ್ಟಾಫ್ ಸೆಲೆಕ್ಷನ್ ಕಮಿಷನ್ ಅಡಿಯಲ್ಲಿ ಜನವರಿ 18 ರಂದು ನಡೆಸಲು ಉದ್ದೇಶಿಸಲಾದ ಸಿಜಿಎಲ್ ಟೈಪಿಂಗ್ ಪರೀಕ್ಷೆಯನ್ನು ಜನವರಿ 31 ರಂದು ನಡೆಸಲು ಮರು ನಿಗದಿಪಡಿಸಲಾಗಿದೆ. ಈ ಶಿಫ್ಟ್‌ನಲ್ಲಿ ಪರೀಕ್ಷೆಗೆ ಹಾಜರಾದ ಎಲ್ಲಾ ಅಭ್ಯರ್ಥಿಗಳು ಜನವರಿ 31 ರಂದು ಮತ್ತೆ ಟೈಪಿಂಗ್ ಟೆಸ್ಟ್ (ಡೇಟಾ ಎಂಟ್ರಿ ಸ್ಪೀಡ್ ಟೆಸ್ಟ್) ಗೆ ಹಾಜರಾಗಬೇಕು ಎಂದು ಸಿಬ್ಬಂದಿ ಆಯ್ಕೆ ಆಯೋಗವು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ: 10th, PUC ಪಾಸಾದವರಿಗೆ ಗುಡ್ ನ್ಯೂಸ್: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಈ ಪರೀಕ್ಷೆಯ ಪ್ರವೇಶ ಪತ್ರವನ್ನು ಜನವರಿ 27 ರಂದು ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಾಗುವಂತೆ ಆಯೋಗವು ಪ್ರಕಟಣೆಯಲ್ಲಿ ತಿಳಿಸಿದೆ. ಪರೀಕ್ಷೆಯು ಜನವರಿ 27 ರಂದು ಮಧ್ಯಾಹ್ನ 1 ಗಂಟೆಗೆ ಪ್ರಾರಂಭವಾಗುತ್ತದೆ. ಇತರ ವಿವರಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು.
ಅಧಿಕೃತ ವೆಬ್ಸೈಟ್: ssc.gov.in ಭೇಟಿ ಮಾಡಿ, ಪರೀಕ್ಷೆಯನ್ನು ಮುಂದೂಡಿರುವುದಾಗಿ ಪ್ರಕಟಣೆಯಲ್ಲಿ ಪರಿಶೀಲಿಸಬಹುದಾಗಿದೆ.
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:39 am, Tue, 21 January 25