SSC CHSL Recruitment 2022: 12ನೇ ತರಗತಿ ಪಾಸಾದವರಿಗೆ ಸರ್ಕಾರಿ ಉದ್ಯೋಗಾವಕಾಶ
SSC CHSL Recruitment 2022: ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 12 ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
SSC CHSL Recruitment 2022: ಸರ್ಕಾರಿ ಉದ್ಯೋಗವನ್ನು ಎದುರು ನೋಡುತ್ತಿರುವ ಯುವಕರಿಗೆ ಇಲ್ಲಿದೆ ಸುವರ್ಣಾವಕಾಶ. ಇದಕ್ಕಾಗಿ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) LDC, JSA, PA, SA ಮತ್ತು DEO ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SSC ಯ ಅಧಿಕೃತ ವೆಬ್‌ಸೈಟ್ ssc.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಳು ಈ ಕೆಳಗಿನಂತಿವೆ.
SSC CHSL Recruitment 2022 ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 4726
SSC CHSL Recruitment 2022 ಗಾಗಿ ಅರ್ಹತಾ ಮಾನದಂಡಗಳು: ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 12 ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
SSC CHSL Recruitment 2022 ಗಾಗಿ ವಯೋಮಿತಿ: ಈ ಹುದ್ದೆಗಳಿಗೆ 18 ರಿಂದ 27 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
SSC CHSL Recruitment 2022 ಗಾಗಿ ಅರ್ಜಿ ಶುಲ್ಕ: ಈ ಹುದ್ದೆಗಳ ಅರ್ಜಿ ಸಲ್ಲಿಕೆಗೆ 100 ರೂ. ಪಾವತಿಸಬೇಕಾಗುತ್ತದೆ.
SSC CHSL Recruitment 2022 ಗಾಗಿ ಆಯ್ಕೆ ಪ್ರಕ್ರಿಯೆ: CBT, ಡಿಸ್ಕ್ರಿಪ್ಟಿವ್ ಪೇಪರ್ ಮತ್ತು ಟೈಪಿಂಗ್ ಟೆಸ್ಟ್/ಸ್ಕಿಲ್ ಟೆಸ್ಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
SSC CHSL Recruitment 2022ಗಾಗಿ ವೇತನ: ಲೋವರ್ ಡಿವಿಷನ್ ಕ್ಲರ್ಕ್ (LDC) / ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ (JSA): 19 ಸಾವಿರದಿಂದ 63,200 ರೂ.ವರೆಗೆ ವೇತನ ಸಿಗಲಿದೆ. ಪೋಸ್ಟಲ್ ಅಸಿಸ್ಟೆಂಟ್ (ಪಿಎ) / ಶಾರ್ಟನಿಂಗ್ ಅಸಿಸ್ಟೆಂಟ್ (ಎಸ್‌ಎ): 25 ಸಾವಿರದಿಂದ 81,100 ರೂ.ವರೆಗೆ ವೇತನ ಸಿಗಲಿದೆ. ಡೇಟಾ ಎಂಟ್ರಿ ಆಪರೇಟರ್ (DEO): 25 ಸಾವಿರದಿಂದ 92,300 ರೂ.ವರೆಗೆ ವೇತನ ಸಿಗಲಿದೆ. ಡೇಟಾ ಎಂಟ್ರಿ ಆಪರೇಟರ್, ಗ್ರೇಡ್ ‘ಎ’: 25 ಸಾವಿರದಿಂದ 81 ಸಾವಿರದವರೆಗೆ ವೇತನ ಸಿಗಲಿದೆ.
SSC CHSL Recruitment 2022: ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 7.
SSC CHSL Recruitment 2022 ಅರ್ಜಿ ಸಲ್ಲಿಸುವುದು ಹೇಗೆ? ಅಭ್ಯರ್ಥಿಗಳು ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!
ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?
(SSC CHSL Recruitment 2022: Apply for 4726 Posts)