SSC CPO Recruitment 2022: ಸ್ಟಾಫ್ ಸೆಲೆಕ್ಷನ್ ಕಮಿಷನ್ ( SSC ) ದೆಹಲಿ ಪೊಲೀಸ್ ಅಡಿಯಲ್ಲಿನ ಸಬ್-ಇನ್ಸ್‌ಪೆಕ್ಟರ್ (GD) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಸ್ಟಾಫ್ ಸೆಲೆಕ್ಷನ್ ಕಮಿಷನ್ನ ಅಧಿಕೃತ ವೆಬ್‌ಸೈಟ್ ssc.nic.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ:
ಈ ನೇಮಕಾತಿಯ ಮೂಲಕ ಒಟ್ಟು 554 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಅರ್ಹತಾ ಮಾನದಂಡ:
ಶೈಕ್ಷಣಿಕ ಅರ್ಹತೆ: ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗಾಗಿ, ಅಭ್ಯರ್ಥಿಗಳು ವಿವರವಾದ ಅಧಿಸೂಚನೆಯಿಂದ ಶಿಕ್ಷಣ ಅರ್ಹತೆಯನ್ನು ಪರಿಶೀಲಿಸಿ.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 35400 ರಿಂದ 112400 ರೂ.ವರೆಗೆ ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಐದು ಪ್ರಕ್ರಿಯೆಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅವುಗಳೆಂದರೆ…
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು 20-25 ವರ್ಷ ವಯಸ್ಸಿನವರಾಗಿರಬೇಕು.
ಅರ್ಜಿ ಶುಲ್ಕ:
ಅಭ್ಯರ್ಥಿಯು ಅರ್ಜಿ ಶುಲ್ಕವಾಗಿ ರೂ 100 ಪಾವತಿಸಬೇಕಾಗುತ್ತದೆ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 30, 2022.
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಅಭ್ಯರ್ಥಿಗಳು ಇಂದಿನಿಂದ ಆಗಸ್ಟ್ 10, 2022 ರಿಂದ ಸಿಬ್ಬಂದಿ ಆಯ್ಕೆ ಆಯೋಗದ (SSC) ಅಧಿಕೃತ ವೆಬ್‌ಸೈಟ್ ssc.nic.in ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.