Good News: 70,000 ಹುದ್ದೆಗಳ ನೇಮಕಾತಿ ಬಗ್ಗೆ ಅಧಿಸೂಚನೆ ಪ್ರಕಟಿಸಿದ ಸ್ಟಾಫ್ ಸೆಲೆಕ್ಷನ್ ಕಮಿಷನ್

| Updated By: Rakesh Nayak Manchi

Updated on: Jun 23, 2022 | 3:48 PM

ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ 70,000 ಹುದ್ದೆಗಳನ್ನು ಭರ್ತಿ ಮಾಡುವ ನಿರ್ಧಾರದ ಬಗ್ಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್ ಅಧಿಸೂಚನೆಯನ್ನು ಪ್ರಕಟಿಸಿದೆ.

Good News: 70,000 ಹುದ್ದೆಗಳ ನೇಮಕಾತಿ ಬಗ್ಗೆ ಅಧಿಸೂಚನೆ ಪ್ರಕಟಿಸಿದ ಸ್ಟಾಫ್ ಸೆಲೆಕ್ಷನ್ ಕಮಿಷನ್
ಸ್ಟಾಫ್ ಸೆಲೆಕ್ಷನ್ ಕಮಿಷನ್
Follow us on

ಮುಂದಿನ ಒಂದೂವರೆ ವರ್ಷದಲ್ಲಿ 10 ಲಕ್ಷ ಜನರನ್ನು ನೇಮಕ ಮಾಡಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸೂಚಿಸಿದ ಬೆನ್ನಲ್ಲೆ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಸರ್ಕಾರಿ ಹುದ್ದೆಗಳಿಗಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ 70,000 ಹುದ್ದೆಗಳನ್ನು ಭರ್ತಿ ಮಾಡುವ ನಿರ್ಧಾರವನ್ನು ಸ್ಟಾಫ್ ಸೆಲೆಕ್ಷನ್ ಕಮಿಷನ್ ಅಧಿಸೂಚನೆಯನ್ನು ಪ್ರಕಟಿಸಿದೆ.

ಇದನ್ನೂ ಓದಿ: ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.

ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗೊಳಿಸುವ ತನ್ನ ನಿರಂತರ ಪ್ರಯತ್ನಗಳಲ್ಲಿ ಆಯೋಗವು ಸುಮಾರು 70,000 ಹೆಚ್ಚುವರಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಯನ್ನು ಕೈಗೆತ್ತಿಕೊಳ್ಳಲಿದೆ. ನಿರ್ದಿಷ್ಟ ಪರೀಕ್ಷೆಗಳ ಸೂಚನೆಗಳನ್ನು ಅದರ ವೆಬ್‌ಸೈಟ್‌ನಲ್ಲಿ ಸರಿಯಾದ ಸಮಯದಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ ಎಂದು ಆಯೋಗವು ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: Agnipath Scheme ಭಾರತೀಯ ಸೇನೆಯಲ್ಲಿ ಅಗ್ನಿವೀರರಾಗಲು ಅರ್ಹತೆ ಏನು? ವೇತನ ಎಷ್ಟಿರುತ್ತದೆ?

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಳಿಗಾಗಿ ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡುವಂತೆ ಸೂಚಿಸಲಾಗಿದ್ದು, ಅರ್ಜಿ ಸಲ್ಲಿಸಲು ಬಯಸುವವರು ಅಧಿಕೃತ ವೆಬ್‌ಸೈಟ್ ssc.nic.in ಗೆ ಭೇಟಿ ನೀಡಬೇಕು.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ