SSC Recruitment 2022: ಎಸ್​​ಎಸ್​ಸಿ ಜೆಇ ಹುದ್ದೆಗಳ ನೇಮಕಾತಿ: ವೇತನ 1 ಲಕ್ಷ ರೂ.

TV9kannada Web Team

TV9kannada Web Team | Edited By: Zahir PY

Updated on: Aug 16, 2022 | 8:00 AM

SSC JE Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SSC ಯ ಅಧಿಕೃತ ವೆಬ್‌ಸೈಟ್ ssc.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

SSC Recruitment 2022: ಎಸ್​​ಎಸ್​ಸಿ ಜೆಇ ಹುದ್ದೆಗಳ ನೇಮಕಾತಿ: ವೇತನ 1 ಲಕ್ಷ ರೂ.
SSC JE Recruitment 2022

SSC JE Recruitment 2022: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಜೂನಿಯರ್ ಇಂಜಿನಿಯರ್ (SSC JE Recruitment 2022) ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SSC ಯ ಅಧಿಕೃತ ವೆಬ್‌ಸೈಟ್ ssc.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

SSC JE Recruitment 2022- ಅರ್ಹತಾ ಮಾನದಂಡಗಳು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಜಿನಿಯರ್ ಪದವಿ ಮಾಡಿಬೇಕು. ಹಾಗೆಯೇ ಆಯಾ ವಿಭಾಗಕ್ಕೆ ವಿಭಿನ್ನ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಸಂಬಂಧಿತ ವಿದ್ಯಾರ್ಹತೆಯನ್ನು ಹೊಂದಿರಬೇಕು.

ತಾಜಾ ಸುದ್ದಿ

SSC JE Recruitment 2022- ಅರ್ಜಿ ಶುಲ್ಕ: ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ- 100 ರೂ. ಸ್ತ್ರೀ/SC/ST/PH/ಮಾಜಿ ಸೈನಿಕ ಅಭ್ಯರ್ಥಿಗಳಿಗೆ- ಯಾವುದೇ ಶುಲ್ಕವಿಲ್ಲ

SSC JE Recruitment 2022- ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ. 35400 ರಿಂದ 1,12400 ರೂ. ವೇತನ ನೀಡಲಾಗುತ್ತದೆ.

SSC JE Recruitment 2022- ಆಯ್ಕೆ ಪ್ರಕ್ರಿಯೆ:

  • ಕಂಪ್ಯೂಟರ್ ಆಧಾರಿತ ಆಬ್ಜೆಕ್ಟಿವ್ ಟೈಪ್ ಪರೀಕ್ಷೆ
  • ಸಾಂಪ್ರದಾಯಿಕ ಮಾದರಿಯ ಲಿಖಿತ ಪರೀಕ್ಷೆಯ
  • ದಾಖಲೆ ಪರಿಶೀಲನೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

SSC JE Recruitment 2022- ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಸೆಪ್ಟೆಂಬರ್ 2, 2022

SSC JE Recruitment 2022- ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada